ಡಿಸೆಂಬರ್ 13 ರಿಂದ ಬೆಳಗಾವಿ ಅಧಿವೇಶನ: ರಾಜ್ಯಪಾಲರ ಅಧಿಸೂಚನೆ

ಡಿಸೆಂಬರ್ 13 ರಿಂದ ಬೆಳಗಾವಿ ಅಧಿವೇಶನ: ರಾಜ್ಯಪಾಲರ ಅಧಿಸೂಚನೆ

ಬೆಂಗಳೂರು: ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನ ಡಿಸೆಂಬರ್ 13ರಿಂದ 24 ರ ವರೆಗೆ ನಡೆಯಲಿದೆ. ಈ ಸಂಬಂಧ ಸರ್ಕಾರದ ಅಧಿಕೃತ ಆದೇಶ ಹೊರಬಿದ್ದಿದೆ.

ಒಟ್ಟು 10 ದಿನಗಳ ಕಾಲ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ಜರುಗಲಿದೆ.

ಕೋವಿಡ್ , ಪ್ರವಾಹದ ಕಾರಣ ಕಳೆದ ಎರಡು ವರ್ಷಗಳಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆದಿರಲಿಲ್ಲ.

ಡಿಸೆಂಬರ್‌ 13 ರ ಸೋಮವಾರ ಬೆಳಿಗ್ಗೆ 11 ಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ಕರೆಯಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ಅಧಿಸೂಚನೆ ಹೊರಡಿಸಿದ್ದಾರೆ.

ಪ್ರವಾಹ ಮತ್ತು ಕೋವಿಡ್‌ ಕಾರಣ ಕಳೆದ ಎರಡು ವರ್ಷಗಳಿಂದ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸಿರಲಿಲ್ಲ. ಇದೀಗ ಕೋವಿಡ್‌ ಪ್ರಕರಣಗಳು ಕಡಿಮೆ ಆಗಿರುವುದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ. 13ರಿಂದ 24ವರೆಗೆ ಕಲಾಪ ನಡೆಸಲು ಸರ್ಕಾರ ನಿರ್ಧರಿಸಿದ್ದು, 10 ದಿನ ಕಲಾಪ ನಡೆಯಲಿದೆ.