ಡೆಲ್ಲಿ ಕ್ಯಾಪಿಟಲ್ಸ್-ಮುಂಬೈ ಇಂಡಿಯನ್ಸ್ ಮುಖಾಮುಖಿ: ಎರಡನೇ ಸೋಲು ಕಾಣುತ್ತಾ ಬಲಿಷ್ಠ ಮುಂಬೈ ಪಡೆ

ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಸೋಮವಾರ ನಡೆಯುವ ಎರಡನೇ ಪಂದ್ಯದಲ್ಲಿ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಸೆಣೆಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಮುಂಬೈ ಇಂಡಿಯನ್ಸ್ ವಿರುದ್ಧ ಆಡಿದ್ದ ಮೊದಲನೇ ಪಂದ್ಯದಲ್ಲಿ ಹೀನಾಯವಾಗಿ ಸೋಲನುಭವಿಸಿತ್ತು, ಈ ಅದಕ್ಕೆ ಸೇಡು ತೀರಿಸಿಕೊಳ್ಳುವ ವಿಶ್ವಾಸದಲ್ಲಿದೆ.
ಎರಡೂ ತಂಡಗಳ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿರುವುದು ಎರಡೂ ತಂಡಗಳ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ. ಇದು ಎರಡೂ ತಂಡಗಳಿಗೆ ಹೆಚ್ಚು ಆಕ್ರಮಣಕಾರಿಯಾಗಿ ಆಡಲು ಅವಕಾಶ ನೀಡುತ್ತದೆ. ಡೆಲ್ಲಿ ಕ್ಯಾಪಿಟಲ್ಸ್ ಉಳಿದ ಎರಡೂ ಪಂದ್ಯಗಳಲ್ಲಿ ಗೆದ್ದರೆ ನೇರವಾಗಿ ಫೈನಲ್ ಪ್ರವೇಶಿಸುವ ಅವಕಾಶ ಇರುತ್ತದೆ.
ಎರಡೂ ತಂಡಗಳು ತಾವು ಆಡಿದ ಕೊನೆಯ ಪಂದ್ಯಗಳಲ್ಲಿ ಸೋಲನುಭವಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಗುಜರಾತ್ ಜೈಂಟ್ಸ್ ವಿರುದ್ಧ 11 ರನ್‌ಗಳ ಸೋಲು ಕಂಡಿದ್ದರೆ. ಮುಂಬೈ ಇಂಡಿಯನ್ಸ್ ಕೂಡ ಮೊದಲ ಸೋಲಿನ ರುಚಿ ನೋಡಿದೆ. ಯುಪಿ ವಾರಿಯರ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿತ್ತು.
ನಾಳಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಗೆಲುವು ಸಾಧಿಸಿದರೆ ನೇರವಾಗಿ ಫೈನಲ್‌ಗೆ ಅರ್ಹತೆ ಪಡೆಯಲಿದೆ. ಡೆಲ್ಲಿ ಕ್ಯಾಪಿಟಲ್ಸ್ ಫೈನಲ್ ತಲುಪಲು 3ನೇ ಸ್ಥಾನದಲ್ಲಿರುವ ತಂಡದ ಜೊತೆ ಕ್ವಾಲಿಫೈಯರ್ ಪಂದ್ಯದಲ್ಲಿ ಸೆಣೆಸಬೇಕಾಗುತ್ತದೆ.
ಭಾರಿ ಪೈಪೋಟಿ ನಿರೀಕ್ಷೆ
ಉಭಯ ತಂಡಗಳು ಬಲಿಷ್ಠ ಬ್ಯಾಟಿಂಗ್ ಪಡೆಯನ್ನು ಹೊಂದಿರುವುದರಿಂದ ಹೈಸ್ಕೋರಿಂಗ್ ಪಂದ್ಯವನ್ನು ನಿರೀಕ್ಷೆ ಮಾಡಬಹುದಾಗಿದೆ. ಮುಂಬೈ ಇಂಡಿಯನ್ಸ್ ತಂಡದಲ್ಲಿ ಹೇಯ್ಲಿ ಮ್ಯಾಥ್ಯೂಸ್, ನ್ಯಾಟ್ ಸಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ ಪ್ರಮುಖ ಬ್ಯಾಟಿಂಗ್ ಶಕ್ತಿಯಾಗಿದ್ದಾರೆ. ಕಳೆದ ಪಂದ್ಯದಲ್ಲಿ ಉತ್ತಮ ಇನ್ನಿಂಗ್ಸ್ ಆಡಿದ ಇಸ್ಸಿ ವಾಂಗ್ ಕೂಡ ಭರವಸೆ ಮೂಡಿಸಿದ್ದಾರೆ.
ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಆರಂಭಿಕರಾದ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಶಫಾಲಿ ವರ್ಮಾ ಪ್ರಮುಖ ಬ್ಯಾಟಿಂಗ್ ಅಸ್ತ್ರವಾಗಿದ್ದಾರೆ. ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್‌ರಂತಹ ಪ್ರಮುಖ ಬ್ಯಾಟರ್ ಗಳನ್ನು ಹೊಂದಿದ್ದು, ಮುಂಬೈ ಇಂಡಿಯನ್ಸ್ ಬೌಲಿಂಗ್ ಪಡೆಯ ವಿರುದ್ಧ ಅಬ್ಬರಿಸಲು ಸಿದ್ಧವಾಗಿದ್ದಾರೆ.
ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದೆ. ಸಂಜೆ 7.30ಕ್ಕೆ ಈ ಪಂದ್ಯ ಆರಂಭವಾಗಲಿದೆ. ಕಳೆದ ಪಂದ್ಯದಲ್ಲಿ ಇಲ್ಲಿ ಬೌಲಿಂಗ್‌ಗೆ ಹೆಚ್ಚಿನ ಸಹಕಾರ ಸಿಕ್ಕಿತ್ತು, ಸೋಮವಾರ ಪಂದ್ಯದಲ್ಲಿ ಕೂಡ ಬೌಲರ್ ಗಳು ಪಂದ್ಯದ ಗೆಲುವಿನಲ್ಲಿ ಮುಖ್ಯಪಾತ್ರ ವಹಿಸುವ ಸಾಧ್ಯತೆಯನ್ನು ತಳ್ಳಿಹಾಕುವಂತಿಲ್ಲ.
ಉಭಯ ತಂಡಗಳ ಸಂಭಾವ್ಯ ಆಡುವ ಬಳಗ
ಮುಂಬೈ ಇಂಡಿಯನ್ಸ್: ಹೇಯ್ಲಿ ಮ್ಯಾಥ್ಯೂಸ್, ಯಾಸ್ತಿಕಾ ಭಾಟಿಯಾ (ವಿಕೆಟ್ ಕೀಪರ್), ನ್ಯಾಟ್ ಸ್ಕಿವರ್-ಬ್ರಂಟ್, ಹರ್ಮನ್‌ಪ್ರೀತ್ ಕೌರ್ (ನಾಯಕಿ), ಅಮೆಲಿಯಾ ಕೆರ್, ಇಸ್ಸಿ ವಾಂಗ್, ಹುಮೈರಾ ಕಾಜಿ, ಧಾರಾ ಗುಜ್ಜರ್, ಅಮಂಜೋತ್ ಕೌರ್, ಜಿಂತಿಮಣಿ ಕಲಿತಾ, ಸೈಕಾ ಇಶಾಕ್
ಡೆಲ್ಲಿ ಕ್ಯಾಪಿಟಲ್ಸ್ : ಮೆಗ್ ಲ್ಯಾನಿಂಗ್ (ನಾಯಕಿ), ಶಫಾಲಿ ವರ್ಮಾ, ಲಾರಾ ಹ್ಯಾರಿಸ್, ಜೆಮಿಮಾ ರಾಡ್ರಿಗಸ್, ಮರಿಜಾನ್ನೆ ಕಪ್, ಜೆಸ್ ಜೊನಾಸೆನ್, ತಾನಿಯಾ ಭಾಟಿಯಾ (ವಿಕೆಟ್ ಕೀಪರ್), ಮಿನ್ನು ಮಣಿ, ರಾಧಾ ಯಾದವ್, ಶಿಖಾ ಪಾಂಡೆ, ತಾರಾ ನಾರ್ರಿಸ್.