ಡಿ. 16ರವರೆಗೆ ಕರ್ನಾಟಕದಲ್ಲಿ ವ್ಯಾಪಕ ಮಳೆ

ತಮಿಳುನಾಡಿಗೆ ಎಂಟ್ರಿ ಕೊಟ್ಟಿರುವ ಮ್ಯಾಂಡಸ್ ಚಂಡಮಾರುತದ ಪ್ರಭಾವದಿಂದ ಕರ್ನಾಟಕದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಅಕಾಲಿಕ ಮಳೆಯಾಗುತ್ತಿದೆ. ಇಂದು ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ಗುಡುಗು ಸಹಿತ ಮಳೆ ಮುಂದುವರಿಯಲಿದೆ. ಹವಾಮಾನ ಇಲಾಖೆಯ (IMD) ಮಾಹಿತಿ ಪ್ರಕಾರ, ಕರ್ನಾಟಕದ ಬೆಂಗಳೂರು, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಕೆಲವು ಭಾಗ ಹಾಗೂ ಕರಾವಳಿಯಲ್ಲಿ ಡಿ. 16ರವರೆಗೂ ಮಳೆಯಾಗಲಿದೆ.