ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗಟ್ಟಿದ ಕಳಂಕ ಕಾಂಗ್ರೆಸ್ ಗಿದೆ: ಸಚಿವ ಆರ್ ಅಶೋಕ್

ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗಟ್ಟಿದ ಕಳಂಕ ಕಾಂಗ್ರೆಸ್ ಗಿದೆ: ಸಚಿವ ಆರ್ ಅಶೋಕ್

ಬೆಂಗಳೂರು: ದೇಶದಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗಟ್ಟಿದ ಕಳಂಕ ಕಾಂಗ್ರೆಸ್​ಗಿದೆ ಎಂದು ಕಂದಾಯ ಸಚಿವ ಆರ್ ಅಶೋಕ್ ಆರೋಪಿಸಿದ್ದಾರೆ. ಈ ಸಂಬಂಧ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು,ಪತ್ರಕರ್ತರನ್ನು ಗುರಿಯಾಗಿಟ್ಟುಕೊಂಡು ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಬೆದರಿಕೆ ಹಾಕುತ್ತಿದೆ.

ಇಂದಿರಾ ಗಾಂಧಿಯವರಿಗೆ ಬಹಳ ಗುರಿಯಾಗಿದದ್ದು ಮಾಧ್ಯಮ. ದೇಶದಲ್ಲಿ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಇಡೀ ಪತ್ರಕರ್ತರನ್ನು ಜೈಲಿಗಟ್ಟಿದ ಕಳಂಕ ಕಾಂಗ್ರೆಸ್​ಗಿದೆ. ಇವತ್ತು ಆ ಹಾದಿಯಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಮಾಡುತ್ತಿರುವ ಹೇಡಿತನವಿದು.

ಪತ್ರಕರ್ತರ ಆತ್ಮವಿಶ್ವಾಸ ಕುಗ್ಗಿಸುವ ಕೆಲಸ ನಡೆಯುತ್ತಿದೆ. ಗಿಫ್ಟ್ ಹೆಸರಲ್ಲಿ ಕಾಂಗ್ರೆಸ್ ಬ್ಲಾಕ್ ಮೇಲ್​ ಮಾಡುತ್ತಿದೆ ಎಂದು ಆರೋಪಿ ಸಿದರು. ಪತ್ರಕರ್ತರಲ್ಲೂ ಕೂಡ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಬೇಧ ಭಾವದ ಒಡಕು ಮಾಡಿದ್ದಾರೆ. ಲಿಂಗಾಯುತ -ವೀರಶೈವ ಬೇರ್ಪಡಿಸೋಕೆ ಹೋದಂತೆ ಪತ್ರಕರ್ತರನ್ನು ಜಾತಿ, ಧರ್ಮಾಧಾರಿತವಾಗಿ ಬೇರೆ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರಿಗೆ ಈ ಅಂಟು ಬಂದುಬಿಟ್ಟಿದೆ. ಒಡೆದು ಆಳುವ ನೀತಿಯನ್ನು ಇವತ್ತು ಸಮಾಜದ ನಾಲ್ಕನೇ ಅಂಗ ಪತ್ರಿಕಾರಂಗದ ಮೇಲೆ ಮಾಡುತ್ತಿದ್ದಾರೆ ಎಂದು ಅಶೋಕ್ ಕಿಡಿಕಾರಿದ್ದಾರೆ.