'ಕರ್ನಾಟಕದ 2ನೇ ಅಧಿಕೃತ ಭಾಷೆ'ಯಾಗಿ 'ತುಳುವಿಗೆ ಸ್ಥಾನಮಾನ' ನೀಡಲು ಸಮಿತಿ ರಚನೆ : ಸಚಿವ ಸುನಿಲ್ ಕುಮಾರ್

'ಕರ್ನಾಟಕದ 2ನೇ ಅಧಿಕೃತ ಭಾಷೆ'ಯಾಗಿ 'ತುಳುವಿಗೆ ಸ್ಥಾನಮಾನ' ನೀಡಲು ಸಮಿತಿ ರಚನೆ : ಸಚಿವ ಸುನಿಲ್ ಕುಮಾರ್

ಮಂಗಳೂರು : ತುಳು ಪಂಚ ದ್ರಾವಿಡ ಭಾಷೆಗಳಲ್ಲಿ ಒಂದು ಭಾಷೆ. ಭಾರತದ ಕರ್ನಾಟಕ ರಾಜ್ಯದ ಪಶ್ಚಿಮ ತೀರದಲ್ಲಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಗಳಲ್ಲಿ ಇದು ಹೆಚ್ಚಾಗಿ ಮಾತನಾಡುತ್ತಾರೆ . ತುಳು ಮಾತಾಡುವವರನ್ನು ತುಳುವರು (ತುಳುವಿನಲ್ಲಿ ತುಳುವೆರ್) ಎಂದು ಕರೆಯುತ್ತಾರೆ.

ಕರಾಔಳಿ ಜನರು ಹಲವು ವರ್ಷಗಳಿಂದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ತುಳು ಭಾಷಿಕರು ಸರ್ಕಾರಗಳಿಗೆ ಮನವಿ ಮಾಡುತ್ತಲೇ ಬಂದಿದ್ದಾರೆ.

ಕರಾವಳಿ ಭಾಗದ ಜನರ ತುಳು ಭಾಷೆಯನ್ನು ಕರ್ನಾಟಕದ ಏರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ಸಂಬಂಧ, ಅಧ್ಯಯನ ನಡೆಸಿ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ನೀಡಲು ಡಾ. ಮೋಹನ್ ಆಳ್ವ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಈ ಸಮಿತಿಗೆ ಒಂದು ವಾರದಲ್ಲಿ ವರದಿ ನೀಡಲು ಸೂಚಿಸಲಾಗಿದೆ.ಹಲವು ವರ್ಷಗಳಿಂದ ತುಳು ಭಾಷೆಯನ್ನು ಸಂವಿಧಾನದ ಎಂಟನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡುವಂತೆ ತುಳು ಭಾಷಿಕರು ಸರ್ಕಾರಗಳಿಗೆ ಮನವಿ ಮಾಡಿದ್ದರು, ಈ ನಿಟ್ಟಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಟ್ವೀಟ್ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯುವ ಮೂಲಕ ಜನರ ಬೇಡಿಕೆಗೆ ಕರ್ನಾಟಕ ಸರ್ಕಾರ ಸ್ಪಂದಿಸಲು ಮುಂದಾಗಿದ್ದಾರೆ ಎಂದು ತಿಳಿಸಿದ್ದಾರೆ.