ತೆಲಂಗಾಣ : ಲಾಕ್ಡೌನ್ ಸಂಪೂರ್ಣ ತೆರವು ಮಾಡಿದ ಸರ್ಕಾರ
ಹೈದರಾಬಾದ್: ರಾಜ್ಯದಲ್ಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗುತ್ತಿರುವ ಹಿನ್ನೆಲೆ ಲಾಕ್ಡೌನ್ ಅನ್ನು ಸಂಪೂರ್ಣವಾಗಿ ತೆರವುಗೊಳಿಸಲು ಸಂಪುಟ ನಿರ್ಧರಿಸಿದೆ. ಕೊರೊನಾ ಪ್ರಕರಣಗಳ ಪ್ರಮಾಣ ಇಳಿಕೆಯಾಗುತ್ತಿದ್ದು, ರಾಜ್ಯವ್ಯಾಪಿ ಅನ್ಲಾಕ್ಗೆ ಸಂಪುಟದಲ್ಲಿ ನಿರ್ಧರಿಸಲಾಗಿದೆ.ಹಿರಿಯ ವೈದ್ಯಕೀಯ ತಂಡದ ವರದಿಯ ಆಧಾರದ ಮೇಲೆ ಈ ನಿರ್ಧಾರಕ್ಕೆ ಬರಲಾಗಿದೆ. ಲಾಕ್ಡೌನ್ ವೇಳೆ ವಿಧಿಸಲಾಗಿದ್ದ ಎಲ್ಲ ನಿಯಮಗಳನ್ನ ತೆರವುಗೊಳಿಸುವಂತೆ ಎಲ್ಲಾ ಇಲಾಖೆಗಳಿಗೂ ಸಂಪುಟ ಆದೇಶಿಸಿದೆ. ಜೊತೆಗೆ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಂದುವರಿಸುವಂತೆ ಸೂಚಿಸಲಾಗಿದೆ.