ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ?: ಸಿದ್ದು ವಿರುದ್ದ ಬಿಜೆಪಿ ಕಿಡಿ

ಬೆಂಗಳೂರು: ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಬಿಜೆಪಿ ಕಿಡಿಕಾರಿದೆ. ಸಿದ್ದರಾಮಯ್ಯ ಅವರ ತೋರ್ಪಡಿಕೆಯ "ಅಹಿಂದ" ಹೋರಾಟದ ನಾಟಕದಲ್ಲಿ ಒಂದು ಸಮುದಾಯದ ಪರ ಮಾತ್ರ. ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ. ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ಎಂದು ಕೇಳಿದೆ.