ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ : ಮೂವರು ಯುವಕರು ಸ್ಥಳದಲ್ಲೇ ಸಾವು

ದಾವಣಗೆರೆ ; ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬೈಕ್ ಅಪರಿಚಿತ ವಾಹನ ಡಿಕ್ಕಿಯಾಗಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ದಾವಣಗೆರೆ ತಾಲೂಕಿನ ಆನಗೋಡು ಬಳಿ ತಡರಾತ್ರಿ ಒಂದೇ ಬೈಕ್ ನಲ್ಲಿ ತೆರಳುತ್ತಿದ್ದ ದಾವಣಗೆರೆಯ ರಾಮನಗರದ ಮೂವರು ಯುವಕರಿಗೆ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತ ಯುವಕರನ್ನು ದಾವಣಗೆರೆಯ ರಾಮನಗರದ ನಿವಾಸಿಗಳು ಎಂದು ಗುರುತಿಸಲಾಗಿದ್ದು, ಪರಶುರಾಮ (24), ಸಂದೇಶ (23) ಹಾಗೂ ಶಿವು (26) ಮೃತ ದುರ್ದೈವಿಗಳು.