ದಿಢೀರ್ ಸಿಎಂ ಬೊಮ್ಮಾಯಿಯವರ ಇಂದಿನ ಧಾರವಾಡ ಮತ್ತು ನಾಳೆಯ ಹಾವೇರಿ ಜಿಲ್ಲಾ ಪ್ರವಾಸ ರದ್ದು

ದಿಢೀರ್ ಸಿಎಂ ಬೊಮ್ಮಾಯಿಯವರ ಇಂದಿನ ಧಾರವಾಡ ಮತ್ತು ನಾಳೆಯ ಹಾವೇರಿ ಜಿಲ್ಲಾ ಪ್ರವಾಸ ರದ್ದು

ಬೆಂಗಳೂರು: ರಾಜ್ಯಾಧ್ಯಂತ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ ಹಲವೆಡೆ ಹಾನಿಯುಂಟಾಗಿದೆ. ಪರಿಹಾರ ಕಾಮಗಾರಿ ಸೇರಿದಂತೆ ವಿವಿಧ ಕಾರ್ಯಚಟುವಟಿಕೆಗಳಿಗೆ ಚುರುಕು ನೀಡುವ ಸಲುವಾಗಿ, ಸಿಎಂ ಬಸವರಾಜ ಬೊಮ್ಮಾಯಿಇಂದು ಸಂಜೆ ಧಾರವಾಡ ಮತ್ತು ನಾಳೆ ಹಾವೇರಿ ಜಿಲ್ಲಾ ಪ್ರವಾಸ ನಿಗದಿ ಪಡಿಸಲಾಗಿತ್ತು.

ಇದೀಗ ಈ ಪ್ರವಾಸವನ್ನು ದಿಢೀರ್ ರದ್ದುಗೊಳಿಸಲಾಗಿದೆ.

ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ವಿಶೇಷ ಕರ್ತವ್ಯಾಧಿಕಾರಿ ಮಾಹಿತಿ ನೀಡಿದ್ದು, ಸಿಎಂ ಬೊಮ್ಮಾಯಿಯವರ ದಿನಾಂಕ 20-10-2022ರರಂದು ಧಾರವಾಡ ಮತ್ತು ದಿನಾಂಕ 21-10-2022ರಂದು ಹಾವೇರಿ ಜಿಲ್ಲೆಗಳಲ್ಲಿ ಪ್ರವಾಸ ಕಾರ್ಯಕ್ರಮವನ್ನು ನಿಗಧಿ ಪಡಿಸಲಾಗಿತ್ತು. ಈ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ರದ್ದುಪಡಿಸಲಾಗಿದೆ ಎಂದು ತಿಳಿಸಿದ್ದಾರೆ.