ದಿ. ಪುನೀತ್ ರಾಜಕುಮಾರ್ ಅವರಿಗೆ ಇಂದು 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ

ಪವರ್ ಸ್ಟಾರ್ ದಿ. ಪುನೀತ್ ರಾಜಕುಮಾರ್ ಅವರಿಗೆ ರಾಜ್ಯೋತ್ಸವ ದಿನವಾದ ಇಂದು 'ಕರ್ನಾಟಕ ರತ್ನ' ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ವಿಧಾನಸೌಧದ ಮುಂಭಾಗದಲ್ಲಿ ಸಂಜೆ 4 ಗಂಟೆಗೆ ಕಾರ್ಯಕ್ರಮ ನಡೆಯಲಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶಸ್ತಿ ಪ್ರದಾನ ಮಾಡಲಿದ್ದು, ಪುನೀತ್ ರಾಜಕುಮಾರ್ ಅವರ ಪರವಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ.
ಖ್ಯಾತ ಗಾಯಕ ವಿಜಯ ಪ್ರಕಾಶ್ ಮತ್ತು ತಂಡದವರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ರಾಜಕುಮಾರ ಅವರ ಕುಟುಂಬ ಸದಸ್ಯರು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿರಲಿದ್ದಾರೆ.ಇದಕ್ಕಾಗಿ ಸಕಲ ಸಿದ್ದತೆಗಳು ನಡೆದಿದ್ದು, ಇದೇ ವೇಳೆ ವಿಧಾನಸೌಧಕ್ಕೆ ಎರಡು ದಿನಗಳ ಕಾಲ ದೀಪಾಲಂಕಾರ ಮಾಡಲಾಗುತ್ತದೆ.