ದೆಹಲಿಯಲ್ಲಿ ಕಾರು ಡಿಕ್ಕಿ ಹೊಡೆದು 3 ವರ್ಷದ ಬಾಲಕಿ ಸಾವು, ವಾಯುಪಡೆ ಅಧಿಕಾರಿಯ ಪುತ್ರ‌ ಅರೆಸ್ಟ್

ದೆಹಲಿಯಲ್ಲಿ ಕಾರು ಡಿಕ್ಕಿ ಹೊಡೆದು 3 ವರ್ಷದ ಬಾಲಕಿ ಸಾವು, ವಾಯುಪಡೆ ಅಧಿಕಾರಿಯ ಪುತ್ರ‌ ಅರೆಸ್ಟ್

ವದೆಹಲಿ : ನೈಋತ್ಯ ದೆಹಲಿಯ ಕಂಟೋನ್ಮೆಂಟ್ ಪ್ರದೇಶದಲ್ಲಿ ಭಾರತೀಯ ವಾಯುಪಡೆಯ ಹಿರಿಯ ಅಧಿಕಾರಿಯ ಮಗ ಚಲಾಯಿಸುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಮೂರೂವರೆ ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಆರೋಪಿ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಕಾಲೇಜು ವಿದ್ಯಾರ್ಥಿಯಾಗಿದ್ದು, ಭಾನುವಾರ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಫೆಬ್ರವರಿ 26 ರಂದು ಸಂಜೆ 5.20 ಕ್ಕೆ ಆರ್‌ಎಂಎಲ್ ಆಸ್ಪತ್ರೆಯಿಂದ ಮೂರೂವರೆ ವರ್ಷದ ಬಾಲಕಿ ಸಾವನ್ನಪ್ಪಿದ ಬಗ್ಗೆ ಪೊಲೀಸರು ದೂರು ಸ್ವೀಕರಿಸಿದ್ದಾರೆ.

ಭಾರತೀಯ ವಾಯುಪಡೆಯ ಅಧಿಕಾರಿ ಗ್ರೂಪ್ ಕ್ಯಾಪ್ಟನ್ ಭರತ್ ಮಲಿಕ್ ಅವರ ಪುತ್ರ ಸಮರ್ಕ್ ಮಲಿಕ್ (20) ಚಲಾಯಿಸುತ್ತಿದ್ದ ಕಾರು ಬಾಲಕಿಗೆ ಡಿಕ್ಕಿ ಹೊಡೆದಿತ್ತು. ಪರಿಣಾಮ ಬಾಲಕಿ ಗಾಯಗೊಂಡಿದ್ದಳು. ಕೂಡಲೇ ಬಾಲಕಿಯನ್ನು ಆರೋಪಿ ಚಾಲಕ ಸಮರ್ಕ್ ಆಕೆಯ ಕುಟುಂಬದೊಂದಿಗೆ ಆಸ್ಪತ್ರೆಗೆ ಕರೆದೊಯ್ದರು. ಆದ್ರೆ, ಬಾಲಕಿ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ

ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಪೊಲೀಸ್ ತನಿಖೆ ನಡೆಯುತ್ತಿದೆ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ.