ದೆಹಲಿಯ ಓಖ್ಲಾದಲ್ಲಿರುವ ಕಾರ್ಖಾನೆಯಲ್ಲಿ ಅಗ್ನಿ ಅವಘಡ : ಸ್ಥಳಕ್ಕೆ 16 ಅಗ್ನಿಶಾಮಕ ವಾಹನಗಳು ದೌಡು

ನವದೆಹಲಿ : ರಾಷ್ಟ್ರ ರಾಜಧಾನಿ ದೆಹಲಿಯ ಓಖ್ಲಾ 1 ನೇ ಹಂತದ ಕಾರ್ಖಾನೆಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ.
ಪ್ರಾಥಮಿಕ ಮಾಹಿತಿಯಂತೆ ಮಧ್ಯಾಹ್ನ 12:30ರ ಸುಮಾರಿಗೆ ಕಾರ್ಖಾನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಘಟನೆಯಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿ ಸಂಭವಿಸಲ್ಲ, ಕಾರ್ಖಾನೆಯೊಳಗೆ ಯಾರೂ ಸಿಲುಕಿಕೊಂಡಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಘಟನೆಗೆ ಹಿಂದಿನ ಕಾರಣ ಇನ್ನು ತಿಳಿದು ಬಂದಿಲ್ಲ ಎನ್ನಲಾಗುತ್ತಿದೆ.