ದೇವಾಲಯಗಳಿಗೆ ಕೊರೊನಾ ಟಫ್ ರೂಲ್ಸ್ : ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕಂಟಕ

ದೇವಾಲಯಗಳಿಗೆ ಕೊರೊನಾ ಟಫ್ ರೂಲ್ಸ್ : ವೈಕುಂಠ ಏಕಾದಶಿ, ಸಂಕ್ರಾಂತಿಗೂ ಕಂಟಕ

ಬೆಂಗಳೂರು : ಚೀನಾ ಸೇರಿದಂತೆ ಹಲವು ವಿದೇಶಗಳಲ್ಲಿ ಕೊರೊನಾ ಹೊಸ ತಳಿ ಬಿಎಫ್​.7 ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಹರಡುವ ಭೀತಿ ಶುರುವಾಗಿದೆ. ಹೀಗಾಗಿ ಕೊರೊನಾ ನಿಯಂತ್ರಣಕ್ಕಾಗಿ ಫುಲ್‌ ಅಲರ್ಟ್‌ ಆಗಿದ್ದು, ಈ ಇದೀಗ ದೇವಾಲಯಗಳಿಗೆ ಟಫ್ ರೂಲ್ಸ್ ಜಾರಿಯಾಗಿದೆ

ಈ ಬಾರಿ ಹೊಸ ವರ್ಷಕ್ಕೆ ಮಾತ್ರವಲ್ಲದೇ ವೈಕುಂಠ ಏಕಾದಶಿ ಸಂಕ್ರಾಂತಿ ಸಂಭ್ರಮದ ಮೇಲೂ ಕೊರೊನಾ ಪರಿಣಾಮ ಬೀರಲಿದೆ. ವೈಕುಂಠ ಏಕಾದಶಿ ದಿನ ಭಕ್ತರು ದೇವಸ್ಥಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸೇರುತ್ತಾರೆ. ಆ ನಿಟ್ಟಿನಲ್ಲಿ ಕಂಟಕ ಎದುರಾಗಲಿದೆ

ಈ ಹಿನ್ನೆಲೆಯಲ್ಲಿ ದೇವಸ್ಥಾನದ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಲು ಸೂಚನೆ ನೀಡುವುದು, ದೇವಸ್ಥಾನದ ಪ್ರವೇಶ ದ್ವಾರಗಳಲ್ಲಿ ಸ್ಯಾನಿಟೈಸರ್ ಅಳವಡಿಸುವುದು, ಜನಜಂಗುಳಿ ತಡೆಯಲು ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ ಪ್ರತ್ಯೇಕ ವ್ಯವಸ್ಥೆ ಕಲ್ಪಿಸುವುದು ಹಾಗೂ ಸಂಕ್ರಾಂತಿ ಹಬ್ಬಕ್ಕೆ ಜನಜಂಗುಳಿ ತಡೆಯಲು ಈಗಿನಿಂದಲೇ ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದೆ.