ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

ದೇಶಾದ್ಯಂತ ಏಕರೂಪ ನಾಗರಿಕ ಸಂಹಿತೆ ಜಾರಿ: ಅಮಿತ್ ಶಾ

ವದೆಹಲಿ: ಏಕರೂಪ ನಾಗರಿಕ ಸಂಹಿತೆ ಜಾರಿಗೆ ಬಿಜೆಪಿ ಬದ್ಧವಾಗಿದ್ದು, ಎಲ್ಲರೊಂದಿಗೆ ಚರ್ಚೆ ನಡೆಸಿ ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಏಕರೂಪ ನಾಗರಿಕ ಸಂಹಿತೆ ಜಾರಿಗೆ ಸಂಬಂಧಿಸಿದಂತೆ ಪ್ರಜಾಸತ್ತಾತ್ಮಕ ಚರ್ಚೆ ನಡೆಸಿದ ನಂತರ ಜಾರಿಗೊಳಿಸುವ ಉದ್ದೇಶವಿದೆ ಎಂದು ಅವರು ತಿಳಿಸಿದ್ದಾರೆ.

ಸಂವಿಧಾನ ರಚನಾ ಸಮಿತಿ ಕೂಡ ಇದನ್ನು ಶಿಫಾರಸು ಮಾಡಿತ್ತು. ಜನ ಸಂಘದ ದಿನಗಳಿಂದಲೂ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರುವುದು ನಮ್ಮ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ. ಸಂವಿಧಾನ ರಚನಾ ಸಮಿತಿ ಕೂಡ ಸಂಸತ್ ಮತ್ತು ಎಲ್ಲಾ ರಾಜ್ಯಗಳಿಗೂ ಅನುಕೂಲಕರವಾದ ಸಮಯದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿಗೆ ತರಲು ಸಲಹೆ ನೀಡಿತ್ತು ಎಂದು ಹೇಳಿದ್ದಾರೆ.

ಜಾತ್ಯತೀತ ರಾಷ್ಟ್ರ ಭಾರತದಲ್ಲಿ ಧರ್ಮಗಳ ಆಧಾರದ ಮೇಲೆ ಬೇರೆ ಬೇರೆ ಕಾನೂನುಗಳಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ಎಲ್ಲ ನಾಗರಿಕರಿಗೂ ಒಂದೇ ಕಾನೂನು ಇರಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.