ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್, ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಗೆಲುವು!

​ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ಹೇಳಿದ್ದಾರೆ. ಈ ಫಲಿತಾಂಶ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳಿಗೆ ನೀಡಿದ ಉತ್ತರ. ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಗ್ರಾಮೀಣ ಭಾಗದ ಏಳಿಗೆಯನ್ನು, ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತ ಕಸಿದುಕೊಂಡಿದೆ ಎಂದಿದ್ದಾರೆ.

ಧಾರವಾಡದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್, ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ ಗೆಲುವು!
ಹುಬ್ಬಳ್ಳಿ-ಧಾರವಾಡ- ಗದಗ-ಹಾವೇರಿಯ ವಿಧಾನ ಪರಿಷತ್ ದ್ವಿಸದಸ್ಯ ಕ್ಷೇತ್ರದ ಅಭ್ಯರ್ಥಿ ಹಾಗೂ ಅಭ್ಯರ್ಥಿ ಮೊದಲ ಪ್ರಾಶಸ್ತ್ಯದಲ್ಲಿ ಹೆಚ್ಚು ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ 3334 ಮತಗಳನ್ನು ಪಡೆದರೆ, ಬಿಜೆಪಿ ಅಭ್ಯರ್ಥಿ ಪ್ರದೀಪ್ ಶೆಟ್ಟರ್ 2497 ಮತಗಳನ್ನು ಪಡೆದುಕೊಂಡಿದ್ದಾರೆ. ಅಂತಿಮ ಸುತ್ತಿನ ಮತ ಎಣಿಕೆ ನಂತರ ಅಭ್ಯರ್ಥಿಗಳು ಪಡೆದ ಮತಗಳ ವಿವರ
  • ಪ್ರದೀಪ ಶೆಟ್ಟರ - 2497
  • ಸಲೀಂ ಅಹ್ಮದ್ - 3334
  • ಟಿ.ಶಿವಕುಮಾರ- 03
  • ಫಕೀರಡ್ಡಿ ಅತ್ತಿಗೇರಿ- 1
  • ಈರಪ್ಪ ಗುಬ್ಬೆರ - 04
  • ಬಸವರಾಜ ಕೊಟಗಿ - 05
  • ಮಲ್ಲಿಕಾರ್ಜುನ ಹಾವೇರಿ- 1217
  • ಮಹೇಶ ಜೋಷಿ -09
  • ಮಂಜುನಾಥ ಅಡಮನಿ - 05
  • ವಿರೂಪಾಕ್ಷಗೌಡ ಪಾಟೀಲ- 5
  • ಒಟ್ಟು ಸಿಂಧು ಮತ: 7080
  • ಒಟ್ಟು ಅಸಿಂಧು ಮತ- 370
  • ಒಟ್ಟು ಏಣಿಕೆಯಾದ ಮತ - 7450
'ಪರಿಷತ್ ಚುನಾಣೆಯಲ್ಲಿ ಕಾಂಗ್ರೆಸ್ ಸಿದ್ಧಾಂತದ ಗೆಲುವಾಗಿದೆ' ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಗೆಲುವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮತ್ತು ಪರಿಷತ್ ಅಭ್ಯರ್ಥಿ ಸಲೀಂ ಅಹ್ಮದ್ ಹೇಳಿದ್ದಾರೆ. ಈ ಫಲಿತಾಂಶ ಬಿಜೆಪಿ ನೇತೃತ್ವದ ಸರ್ಕಾರದ ವೈಫಲ್ಯಗಳಿಗೆ ನೀಡಿದ ಉತ್ತರ. ಪಂಚಾಯತ್ ರಾಜ್ ವ್ಯವಸ್ಥೆ ಮೂಲಕ ಗ್ರಾಮೀಣ ಭಾಗದ ಏಳಿಗೆಯನ್ನು, ಬಿಜೆಪಿಯ ಭ್ರಷ್ಟಾಚಾರ ಹಾಗೂ ದುರಾಡಳಿತ ಕಸಿದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಆಶ್ವಾಸನೆ ಹಾಗೂ ಅಹಂಕಾರಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಸಲೀಂ ಅಹ್ಮದ್ ಹೇಳಿದರು. ರಾಜ್ಯದಲ್ಲಿ ಗುತ್ತಿಗೆದಾರರು ಶೇ 40ರಷ್ಟು ಕಮೀಷನ್ ಆರೋಪ ದುರ್ದೈವದ ಸಂಗತಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕ್ರಮ ಕೈಗೊಳ್ಳಬೇಕಾದ ಪ್ರಧಾನಿ ಏನು ಮಾಡಲಿಲ್ಲ ಎಂದು ಸಲೀಂ ಅಹ್ಮದ್ ಕಿಡಿಕಾರಿದರು. ನಾನು ಜನರ ಧ್ವನಿಯಾಗಿ ಕೆಲಸ ಮಾಡುವೆ. ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚು ಶಕ್ತಿ ಕೊಡಲು ಶ್ರಮಿಸುತ್ತೇನೆ. ರಾಜ್ಯದಲ್ಲಿ ಕಾಂಗ್ರೆಸ್ ಸೋತ ಕ್ಷೇತ್ರಗಳಲ್ಲಿ ನಾವು ಎಡವಿದ್ದು ಎಲ್ಲಿ ಎಂಬುದರ ಬಗ್ಗೆ ಸಮೀಕ್ಷೆ ನಡೆಸಲಾಗುವುದು ಎಂದು ಸಲಿಮ್ ಅಹಮದ್ ಹೇಳಿದರು.