ಧಾನಿ ಮೋದಿ ಮತ್ತೆ ಜಗತ್ತಿನಲ್ಲೇ ನಂ.1 ಜನಪ್ರಿಯ ನಾಯಕ!
ನವದೆಹಲಿ : ಮಾರ್ನಿಂಗ್ ಕನ್ಸಲ್ಟ್ ಸಂಸ್ಥೆ ಬಿಡುಗಡೆ ಮಾಡಿರುವ ಜಾಗತಿಕ ನಾಯಕರ ಅನುಮೋದನೆ ರೇಟಿಂಗ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಗ್ರಸ್ಥಾನ ಪಡೆದಿದ್ದಾರೆ. ಅಮೆರಿಕದ ಅಧ್ಯಕ್ಷ ಜೋ ಬಿಡೆನ್ ಸೇರಿದಂತೆ ಇತರ ನಾಯಕರನ್ನು ಬಿಟ್ಟು ಪ್ರಧಾನಿ ಮೋದಿ ಅವರು ಶೇ.
ಮಾರ್ನಿಂಗ್ ಕನ್ಸಲ್ಟ್ ಎಂಬ ಯುಎಸ್ ಮೂಲದ ಜಾಗತಿಕ ನಾಯಕ ಅನುಮೋದನೆ ಟ್ರ್ಯಾಕರ್ ಸಂಸ್ಥೆಯಾಗಿದೆ.ಇದರ ಇತ್ತೀಚಿನ ಸಮೀಕ್ಷೆಯು 76 ಪ್ರತಿಶತದಷ್ಟು ಅನುಮೋದನೆಯ ರೇಟಿಂಗ್‌ನೊಂದಿಗೆ ಎಲ್ಲಾ ಜಾಗತಿಕ ನಾಯಕರ ನಡುವೆ ಪಿಎಂ ಮೋದಿ ಮೊದಲು ಸ್ಥಾನದಲ್ಲಿದ್ದಾರೆ. ಜನಪ್ರಿಯತೆಯ ವಿಷಯದಲ್ಲಿ ಯಾವುದೇ ವಿಶ್ವ ನಾಯಕ ಪ್ರಧಾನಿ ಮೋದಿಯ ಹತ್ತಿರವೂ ಇಲ್ಲ. ಎಂದು ಅನುಮೋದನೆ ರೇಟಿಂಗ್ ತೋರಿಸುತ್ತದೆ.
ರೇಟಿಂಗ್ ಪ್ರಕಾರ, ಮೆಕ್ಸಿಕೋ ಅಧ್ಯಕ್ಷ ಆಂಡ್ರೆಸ್ ಮ್ಯಾನುಯೆಲ್ ಲೋಪೆಜ್ ಒಬ್ರಡಾರ್ ಅವರು 61 ಶೇಕಡಾ ಅನುಮೋದನೆ ರೇಟಿಂಗ್‌ನೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ. ಪ್ರಧಾನಿ ಮೋದಿ ಮತ್ತು ಅಧ್ಯಕ್ಷ ಒಬ್ರಡಾರ್ ನಡುವೆ ಶೇ 15ರಷ್ಟು ಅಂತರವಿದೆ.
ಈ ಮಾರ್ನಿಂಗ್ ಕನ್ಸಲ್ಟ್ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ ಮೂರನೇ ಸ್ಥಾನದಲ್ಲಿದ್ದಾರೆ. ಅದೇ ಸಮಯದಲ್ಲಿ, ಇಟಲಿಯ ಪಿಎಂ ಜಾರ್ಜಿಯಾ ಮೆಲೋನಿ ಅವರು ಶೇ. 49 ರ ಅನುಮೋದನೆಯನ್ನು ಪಡೆದಿದ್ದಾರೆ. ಮೆಲೋನಿ ಈ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ಇತ್ತ ಬ್ರೆಜಿಲ್ ಅಧ್ಯಕ್ಷ ಲುಲಾ ಡಿ ಸಿಲ್ವಾ ಅವರು ಜಾರ್ಜಿಯಾ ಮೆಲೋನಿಯಂತೆ ಶೇ.49 ರೇಟಿಂಗ್ ಪಡೆದು ಐದನೇ ಸ್ಥಾನದಲ್ಲಿದ್ದಾರೆ.
ವಿಶ್ವದ ಸೂಪರ್ ಪವರ್ ರಾಷ್ಟ್ರಗಳಲ್ಲಿ ಒಂದಾದ ಯುಎಸ್ ಅಧ್ಯಕ್ಷ ಜೋ ಬಿಡನ್ ಅವರು ಗ್ಲೋಬಲ್ ಲೀಡರ್ ಅಪ್ರೂವಲ್ ರೇಟಿಂಗ್ ಪಟ್ಟಿಯಲ್ಲಿ 6 ನೇ ಸ್ಥಾನದಲ್ಲಿದ್ದಾರೆ. ಕೆನಡಾದ ಪ್ರಧಾನಿ ಜಸ್ಟಿನ್ ಟ್ರುಡೊ ಅವರು ಶೇ39 ಅನುಮೋದನೆ ರೇಟಿಂಗ್‌ನೊಂದಿಗೆ ಏಳನೇ ಸ್ಥಾನದಲ್ಲಿದ್ದಾರೆ. ಸ್ಪೇನ್ ಪ್ರಧಾನ ಮಂತ್ರಿ ಪೆಡ್ರೊ ಸ್ಯಾಂಚೆಜ್ ಎಂಟನೇ ಸ್ಥಾನದಲ್ಲಿದ್ದಾರೆ. ಬ್ರಿಟನ್‌ನ ಪ್ರಧಾನಿ ರಿಷಿ ಸುನಕ್ 10 ನೇ ಸ್ಥಾನದಲ್ಲಿದ್ದಾರೆ.
ಮಾರ್ನಿಂಗ್ ಕನ್ಸಲ್ಟ್ ಪೊಲಿಟಿಕಲ್ ಇಂಟೆಲಿಜೆನ್ಸ್ ಆಸ್ಟ್ರೇಲಿಯಾ, ಆಸ್ಟ್ರಿಯಾ, ಬೆಲ್ಜಿಯಂ, ಬ್ರೆಜಿಲ್, ಕೆನಡಾ, ಫ್ರಾನ್ಸ್, ಜರ್ಮನಿ, ಭಾರತ, ಐರ್ಲೆಂಡ್, ಇಟಲಿ, ಜಪಾನ್, ಮೆಕ್ಸಿಕೋ, ನೆದರ್ಲ್ಯಾಂಡ್ಸ್, ನಾರ್ವೆ, ಪೋಲೆಂಡ್, ಸ್ಪೇನ್, ಸ್ವೀಡನ್, ಸ್ವಿಟ್ಜರ್ಲೆಂಡ್, ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ನಲ್ಲಿನ ಸರ್ಕಾರಿ ನಾಯಕರು ಕುರಿಂತೆ ಅನುಮೋದನೆ ರೇಟಿಂಗ್‌ಗಳನ್ನು ಟ್ರ್ಯಾಕ್ ಮಾಡುವ ಸಂಸ್ಥೆಯಾಗಿದೆ.