ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಪರಿಹಾರ ತಾರತಮ್ಯ – ಈಶ್ವರ್ ಶಿವಳ್ಳಿ ಆರೋಪ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಪರಿಹಾರ ತಾರತಮ್ಯ – ಈಶ್ವರ್ ಶಿವಳ್ಳಿ ಆರೋಪ

ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಮನೆಗಳ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ, ತಾರತಮ್ಯ ಮಾಡಲಾಗುತ್ತಿದೆ ಎಂದು ಧಾರವಾಡ ಗ್ರಾಮೀಣ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಈಶ್ವರ ಶಿವಳ್ಳಿ ಆರೋಪಿಸಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಅಧಿಕಾರಿಗಳು ಜನರು ಕಷ್ಟಕ್ಕೆ ಸ್ಪಂದಿಸುವುದನ್ನು ಬಿಟ್ಟು, ಶಾಸಕ ಅಮೃತ್ ದೇಸಾಯಿ ಅವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ. ಇಂತಹ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಧಾರವಾಡ ತಾಲೂಕಿನ ತಡಕೋಡ, ಕವಲಗೇರಿ, ಕನಕೂರು, ಹೆಬ್ಬಳ್ಳಿ, ಅಮ್ಮಿನಭಾವಿ, ಯಾದವಾಡ, ಲಕಮಾಪುರ, ಲೋಕೂರು, ಕುರುಬಗಟ್ಟಿ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಸಮರ್ಪಕ ಪರಿಹಾರ ಸಿಗದೇ ಸಂತ್ರಸ್ತರು ಸಂಕಷ್ಟದಲ್ಲಿದ್ದಾರೆ. ಈ ಕುರಿತು ಪ್ರಶ್ನಿಸಿದರೆ, ಅಧಿಕಾರಿಗಳು ಕುಂಟು ನೆಪವೊಡ್ಡುತ್ತಿದ್ದಾರೆ. ಬಡವರ ಜೀವನದ ಜೊತೆಗೆ ಶಾಸಕ ಅಮೃತ ದೇಸಾಯಿ ಚೆಲ್ಲಾಟವಾಡುತ್ತಿದ್ದು, ಮುಂಬರುವ ದಿನಗಳಲ್ಲಿ ಜನರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಎಚ್ಚರಿಸಿದರು.