ಧಾರವಾಡ ತಹಸಿಲ್ದಾರ ಕಚೇರಿಗೆ ಡಿಸಿ ಭೇಟಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಧಾರವಾಡ ತಹಸಿಲ್ದಾರ ಕಚೇರಿಗೆ ಡಿಸಿ ಭೇಟಿ, ಸಾರ್ವಜನಿಕರಿಂದ ಅಹವಾಲು ಸ್ವೀಕಾರ

ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಧಾರವಾಡ ತಾಲೂಕು ದಂಡಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಇದೇ ವೇಳೆ ವಿವಿಧ ಗ್ರಾಮಗಳ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ, ಸಾರ್ವಜನಿಕರು ಸಲ್ಲಿಸುವ ಎಲ್ಲ ಅರ್ಜಿಗಳನ್ನು ಸಕಾಲದಲ್ಲಿ ನಿಗದಿಪಡಿಸಿದ ಅವಧಿಯಲ್ಲಿ ವಿಲೇವಾರಿ ಮಾಡಲಾಗುತ್ತಿದೆ. ವಿಳಂಬ ಕುರಿತು ದೂರು ಬಂದಲ್ಲಿ ಪರಿಶೀಲಿಸಲಾಗುವುದು. ವಿವಿಧ ಗ್ರಾಮಗಳ ಕಂದಾಯ ಹಾಗೂ ಇತರ ಅಹವಾಲುಗಳ ಕುರಿತು ಪರಿಶೀಲಿಸಿ, ಸೂಕ್ತ ಕ್ರಮ ಜರುಗಿಸಲಾಗುವುದು ಮತ್ತು ಸಮಸ್ಯೆ ಪರಿಹರಿಸಲಾಗುವುದು ಎಂದು ತಿಳಿಸಿದರು. 

ನಂತರ ಅವರು ತಹಸಿಲ್ದಾರ ಕಚೇರಿಯ ವಿವಿಧ ಶಾಖೆಗಳಿಗೆ ಭೇಟಿ ನೀಡಿ, ವಿವಿಧ ಯೋಜನೆಗಳ ಕಡತ ಪರಿಶೀಲಿಸಿದರು. ಸಿಬ್ಬಂದಿಯ ಕಾರ್ಯ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. 

ಸಾರ್ವಜನಿಕರ ಸಮಸ್ಯೆ, ಅಹವಾಲುಗಳಿಗೆ ತಕ್ಷಣ ಸ್ಪಂದಿಸಿ, ಜಿಲ್ಲಾ ಹಾಗೂ ತಾಲೂಕು ಆಡಳಿದ ಬಗ್ಗೆ ಸಾರ್ವಜನಿಕರ ವಿಶ್ವಾರ್ಹತೆಯನ್ನು ಇನ್ನಷ್ಟು ಹೆಚ್ಚಿಸಲು ಪ್ರಯತ್ನಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಬ್ಬಂದಿಗೆ ಸಲಹೆ ನೀಡಿದರು.