ಧಾರವಾಡ ಪ್ರೀತಿಗೆ ಪಾಲಕರ ವಿರೋಧ ಹಿನ್ನೆಲೆ ಪ್ರೇಮಿಗಳು ಆತ್ಮಹತ್ಯೆ
ಧಾರವಾಡ: ಪ್ರೀತಿಗೆ ಪಾಲಕರ ವಿರೋಧ ವ್ತಕ್ತಪಡಿಸುತ್ತಿದ್ದರೆ ಎಂದು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.
23ವರ್ಷದ ಮೈಲಾರಿ ಕಾಲಾಳದ ಹಾಗೂ 16 ವರ್ಷದ ಅಪ್ರಾಪ್ತೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಇದೀಗ ಚುನಾವಣೆ ನೀತಿ ಸಂಹಿತೆ ಜಾರಿಯಾಗಿದೆ. ಹಾಗಾಗಿ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿದ್ದಾರೆ. ಇನ್ನು ಮಂತ್ರಿಗಳು , ಶಾಸಕರು ತಾವು ಇದ್ದ ಜಾಗದಲ್ಲಿಯೇ ಸರ್ಕಾರಿ ಸವಲತ್ತುಗಳನ್ನು ಬಿಟ್ಟು ಸ್ವಂತ ಕಾರಿನಲ್ಲಿ ಓಡಾಡುತ್ತಿದ್ದಾರೆ. ಇದೀಗ ಬೆಂಗಳೂರಿನಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಲೈಸೆನ್ಸ್ ಹೊಂದಿರುವ ಶಸ್ತ್ರಾಸ್ತ್ರ ಬಳಕೆಗೆ ನಿರ್ಬಂಧ ಹಾಕಲಾಗಿದೆ. ರಾಜ್ಯದಲ್ಲಿ ನೀತಿ ಸಂಹಿತೆ ಮುಕ್ತಾಯವರೆಗೂ ಶಸ್ತ್ರಾಸ್ತ್ರಗಳನ್ನು ಒಪ್ಪಿಸಲು ಆದೇಶ ಹೊರಡಿಸಿದ್ದಾರೆ. ಸಾರ್ವಜನಿಕರು ತಮ್ಮ ವ್ಯಾಪ್ತಿಯ ಠಾಣೆಗೆ ಶಸ್ತ್ರಾಸ್ತ್ರ ಒಪ್ಪಿಸಬೇಕು . ಏಪ್ರಿಲ್ ೧೦ರೊಳಗೆ ಠಾಣೆಯಲ್ಲಿ ಶಸ್ತ್ರಾಸ್ತ್ರಗಳನ್ನು ಒಪ್ಪಿಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.