ಧ್ರುವನಾರಾಯಣ್ ಸಾವಿಗೆ ಸಿದ್ದರಾಮಯ್ಯ, ಮಹದೇವಪ್ಪ ಕಾರಣ: ಛಲವಾದಿ ನಾರಾಯಣಸ್ವಾಮಿ ಆರೋಪ
ಬೆಂಗಳೂರು: ಮಾಜಿ ಕಾಂಗ್ರೆಸ್ ಸಂಸದ ಧ್ರುವನಾರಾಯಣ್ ಸಾವಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಮಾಜಿ ಸಚಿವ ಎಚ್.ಸಿ. ಮಹದೇವಪ್ಪ ಕಾರಣ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಆರೋಪ ಮಾಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಾರಾಯಣಸ್ವಾಮಿ, ಧ್ರುವನಾರಾಯಣ್ ಬೆಳೆಯುವುದು ಸಿದ್ದರಾಮಯ್ಯ ಅವರಿಗೆ ಇಷ್ಟ ಇರಲಿಲ್ಲ.
ವೀರಶೈವ ಲಿಂಗಾಯತ ಕುರಿತು ಸಿಟಿ ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆಂಬ ವಿಚಾರವಾಗಿ ಪ್ರತಿಕ್ರಿಯಿಸಿದ ನಾರಾಯಣಸ್ವಾಮಿ, ಲಿಂಗಾಯತರ ವಿರುದ್ಧ ಸಿಟಿ ರವಿಯವರು ಎಲ್ಲಿಯೂ ಒಂದು ಮಾತುಗಳನ್ನು ಆಡಿಲ್ಲ. ಆದರೆ, ಅವರ ಏಳಿಗೆ ಸಹಿಸದೇ, ಅವರಿಗೆ ಹಾಗೂ ಪಕ್ಷಕ್ಕೆ ಕಳಂಕ ತರಲು ಕಾಂಗ್ರೆಸ್ ಇದನ್ನು ಬಳಸುತ್ತಿದೆ. ಅವರ ಯೋಗ್ಯತೆ ಎಲ್ಲಿಗೆ ಬಂದಿದೆ ಎಂಬುದನ್ನು ಇದರಿಂದಲೇ ಮನಗಾಣಬೇಕು. ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಗೊತ್ತಿದೆ. ಹೀಗಾಗಿ ಹತಾಶರಾಗಿ ಮಾತಾಡ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಕಾಂಗ್ರೆಸ್ ಅನೇಕ ಗ್ಯಾರೆಂಟಿ ಕೊಟ್ಟಿದ್ದಾರೆ. ಕಾಂಗ್ರೆಸ್ ಗ್ಯಾರೆಂಟಿಯಲ್ಲಿ 10 ಕೆಜಿ ಅಕ್ಕಿ, 2000 ರೂ. ಹಣ ಹಾಗೂ 200 ಯುನಿಟ್ ವಿದ್ಯುತ್ ಫ್ರೀ ಅಂತೆ. ಇದೇಲ್ಲ ಕೊಡೊಕ್ಕೆ ಆಗುತ್ತಾ? ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯದಲ್ಲಿ ಇದೆಲ್ಲ ಕೊಟ್ಟಿದ್ದಾರಾ? ಕಾಂಗ್ರೆಸ್ ಟೋಲ್ ಕಿಟ್ ನಮ್ಮ ರಾಜ್ಯದಲ್ಲಿ ನಡೆಯುವುದಿಲ್ಲ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಬೆಲ್ ಮೇಲೆ ಓಡಾಡುವವರೆಲ್ಲ ಮತ್ತೆ ಒಳಗಡೆ ಹೋಗ್ತಾರೆ. ಕಾಂಗ್ರೆಸ್ ಅವರು ಅಧಿಕಾರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ. ಯಾಕೆ ಅಧಿಕಾರಗಳು ಕೆಲಸ ಮಾಡಬಾರದಾ ಎಂದು ಪ್ರಶ್ನಿಸಿದರು. (ದಿಗ್ವಿಜಯ ನ್ಯೂಸ್)