ನನ್ನ ನಂಬಿ ಬಂದವರಿಗೆ ಅತಂತ್ರ ಆಗಬಾರದು; ವೈಎಸ್‌ವಿ ದತ್ತ

ಬೆಂಗಳೂರು: ಜೆಡಿಎಸ್ ಪಕ್ಷ ತೊರೆದು ಕಾಂಗ್ರೆಸ್ ಗೆ ವೈಎಸ್‌ವಿ ದತ್ತ ಸೇರ್ಪಡೆಯಾಗುತ್ತಿದ್ದಾರೆ. ಈ ಕುರಿತು ಮಾತನಾಡಿದ ಅವರು, ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಹೇಳಿದ್ದಾರೆ.ನಗರದಲ್ಲಿ ಮಾತನಾಡಿದ ಅವರು, ನನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ನಾನು ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ಒತ್ತಾಯವಾಗಿದೆ ಎಂದರು.