ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ: ರಾಜ್ಯದ ಜನತೆಯ ವಿಶ್ವಾಸ ಗಳಿಸುವಲ್ಲಿ ಬಿಜೆಪಿ ಸಫಲ: ಅಶ್ವಥ್ ನಾರಾಯಣ್
ಕಲಬುರಗಿ: ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ ರಾಜ್ಯದ ಜನತೆಯ ವಿಶ್ವಾಸ ಗಳಿಸುವಲ್ಲಿ ಬಿಜೆಪಿ ಸಫಲವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2023ರ ಚುನಾವಣೆಗೆ ಸಂಬಂಧಿಸಿದಂತೆ ಪಕ್ಷ ಸಂಘಟನೆ ಮಾಡುವುದು ಅವಿರತವಾಗಿರುತ್ತದೆ.
ಆದರೆ ವಿಪಕ್ಷ ನಾಯಕರು ಇಲ್ಲಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದು, ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.