ನಯಾರಿತ್‌ನಲ್ಲಿ ಭೀಕರ ರಸ್ತೆ ಅಪಘಾತ; 15 ಮಂದಿ ಮೃತ್ಯು

ಮೆಕ್ಸಿಕೋ ಸಿಟಿ: ಭೀಕರ ರಸ್ತೆ ಅಪಘಾತದಲ್ಲಿ 15 ಜನರು ಸಾವನ್ನಪ್ಪಿ 47 ಮಂದಿ ಗಾಯಗೊಂಡ ಘಟನೆ ಪೆಸಿಫಿಕ್ ಕರಾವಳಿ ರಾಜ್ಯವಾದ ನಯಾರಿತ್‌ನಲ್ಲಿ ನಡೆದಿದೆ. ರಜಾ ದಿನದ ಹಿನ್ನೆಲೆ ಜನರು ಬಸ್ ಮೂಲಕ ಪ್ರವಾಸ ಕೈಗೊಂಡಿದ್ದರು. ಈ ವೇಳೆ ಹೆದ್ದಾರಿಯಲ್ಲಿ ಬಸ್ ಪಲ್ಟಿಯಾಗಿದೆ. ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತಕ್ಕೆ ಕಾರಣ ಏನು ಎಂದು ತನಿಖೆ ನಡೆಸಲಾಗುತ್ತಿದೆ.