ನರೇಗಾ ಹಣ ಬಳಕೆ: ಸಿಎಂ ಬೊಮ್ಮಾಯಿ ಸೂಚನೆ
ಬೆಂಗಳೂರು: ಭಾರೀ ಮಳೆಯಿಂದಾಗಿ ನರೇಗಾ ಕೆಲಸಕ್ಕೆ ಅಡ್ಡಿಯಾಗಿದ್ದು, ಆ ಹಿನ್ನೆಲೆಯಲ್ಲಿ ನರೇಗಾ ಅನುದಾನ ಕೇಂದ್ರಕ್ಕೆ ವಾಪಸ್ ಹೋಗುವ ಸಾಧ್ಯತೆ ಇದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಅಧಿಕ ಸಂಖ್ಯೆಯಲ್ಲಿ ನರೇಗಾ ಯೋಜನೆಯಡಿ ಕೆಲಸ ಆರಂಭಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾ ಪಂಚಾಯತ್ ಸಿಇಒಗಳಿಗೆ ಸೂಚಿಸಿದ್ದಾರೆ.
ವಿಧಾನ ಸೌಧದಲ್ಲಿ ಸೋಮವಾರ ನಡೆದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾತನಾ ಡಿದ ಅವರು, ನರೇಗಾ ಯೋಜನೆಯ ಹಣವನ್ನು ನವೆಂಬರ್, ಡಿಸೆಂಬರ್ ಒಳಗೆ ಸಂಪೂರ್ಣ ಬಳಕೆ ಮಾಡುವಂತೆಸೂಚಿಸಿದರು.
ನರೇಗಾ ಯೋಜನೆಯಡಿ ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸುವ ಅನುದಾನ ಹೆಚ್ಚಳ ಸಂಬಂಧ ಕೇಂದ್ರ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಮತ್ತು ಘನ ತ್ಯಾಜ್ಯ ಘಟಕ ನಿರ್ಮಾಣ ಸಂಬಂಧ ಜಮೀನು ಕೊರತೆ
ಗಳಿದ್ದರೆ ಅವುಗಳನ್ನು ನಿವಾರಣೆ ಸಂಬಂಧ ಕ್ರಮ ಕೈಗೊಳ್ಳುವತ್ತ ಗಮನ ಹರಿಸುವಂತೆ ತಾಕೀತು ಮಾಡಿದರು.
ಕೇಂದ್ರದ ಜಲಜೀವನ್ ಮಿಷನ್ ಯೋಜನೆ ಸಂಪೂರ್ಣ ಜಾರಿಗೆ ಕ್ರಮ ಕೈಗೊಳ್ಳಬೇಕು. ಪ್ರತಿಯೊಂದು ಮನೆಗೂ ನಳ್ಳಿಯಲ್ಲಿ ನೀರು ನೀಡಲು ಸುಮಾರು 9 ಸಾವಿರ ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಬಾಕಿ ಉಳಿದಿರುವ ಕೆಲಸವನ್ನು ಶೀರ್ಘ ಪೂರ್ಣಗೊಳಿಸಲು ಸೂಚಿಸಿದರು.