ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ: ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿರುವ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಆರೋಗ್ಯ ಸ್ಥಿರವಾಗಿದ್ದು, ನಿಗಾದಲ್ಲಿದ್ದಾರೆ ಎಂದು ಆಸ್ಪತ್ರೆ ಆಡಳಿತ ಶುಕ್ರವಾರ ತಿಳಿಸಿದೆ. ಅವರು ಹೃದಯ ರೋಗ ತಜ್ಞ ಅನುಪ್ ಬಸು ಅವರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆಸ್ಪತ್ರೆಯ ಆರೋಗ್ಯ ಬುಲೆಟಿನ್ ಪ್ರಕಟಣೆ ಹೊರಡಿಸಿದೆ.
ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮಾರ್ಚ್ 2 ರಂದು ನವದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಜ್ವರದಿಂದ ಬಳಲುತ್ತಿದ್ದು ಆರೋಗ್ಯದ ಕುರಿತು ತಜ್ಞ ವೈದ್ಯರು ನಿಗಾವಹಿಸಿದ್ದಾರೆ ಎಂದು ಸರ್ ಗಂಗಾ ರಾಮ್ ಆಸ್ಪತ್ರೆ ಅಧ್ಯಕ್ಷ ಡಾ.ಡಿ.ಎಸ್.ರಾಣಾ ತಿಳಿಸಿದ್ದಾರೆ.