ನವದೆಹಲಿ: ಸರ್ಕಾರ ರಚನೆ ಸಂಬಂಧ ಅಸ್ಸಾಂ ಸಿಎಂರೊಂದಿಗೆ ಶಾ ಚರ್ಚೆ

ನವದೆಹಲಿ: ತ್ರಿಪುರಾ ಮತ್ತು ನಾಗಾಲ್ಯಾಂಡ್‌ನಲ್ಲಿ ಹೊಸ ಸರ್ಕಾರಗಳ ರಚನೆಯ ಕುರಿತು ಚರ್ಚಿಸಲು ಭಾನುವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದರು.
ತ್ರಿಪುರಾದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ತ್ರಿಪುರಾದಲ್ಲಿ 32 ಸ್ಥಾನಗಳೊಂದಿಗೆ ಬಹುಮತ ಗಳಿಸುವಲ್ಲಿ ಯಶಸ್ವಿಯಾಗಿದೆ. ಅಂತೆಯೇ ನಾಗಾಲ್ಯಾಂಡ್‌ನಲ್ಲಿ 12 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ ಮಿತ್ರಪಕ್ಷವಾದ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ 25 ಸ್ಥಾನಗಳನ್ನು ಪಡೆದುಕೊಂಡಿದೆ.
ಶರ್ಮಾ ಬಿಜೆಪಿ ನೇತೃತ್ವದ ಈಶಾನ್ಯ ಪ್ರಜಾಸತ್ತಾತ್ಮಕ ಒಕ್ಕೂಟದ ಸಂಚಾಲಕರೂ ಆಗಿದ್ದಾರೆ. ಮೂಲಗಳ ಪ್ರಕಾರ, ಸಚಿವ ಸಂಪುಟ ರಚನೆ ಮತ್ತು ಸರ್ಕಾರ ರಚನೆ ಕುರಿತು ಸಭೆಯಲ್ಲಿ ಚರ್ಚಿಸಲಾಗಿ