ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ವದೆಹಲಿ : ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಆಗಲು ಹೈಕಮಾಂಡ್ ಒಪ್ಪುವುದಿಲ್ಲ ಎಂಬ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಹೇಳಿಕೆಯನ್ನು ತಿರುಚಲಾಗಿದೆ.ನಾನು ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೆ ನೀಡಿಲ್ಲ.

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಆಗಲಿದೆ. ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿ, ಅವರು ಮುಖ್ಯಮಂತ್ರಿ ಆಗಬೇಕೆಂಬುದು ತಪ್ಪೇನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿಗೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಅವರನ್ನು ಮುಂದಿನ ಮುಖ್ಯಮಂತ್ರಿಯಾಗಿ ಹೈಕಮಾಂಡ್ ಒಪ್ಪುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾನು ಡಿ.ಕೆ. ಶಿವಕುಮಾರ್ ಇಬ್ಬರೂ ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಗಳು.ಇದು ನನ್ನ ಸಾರ್ವಜನಿಕ ಜೀವನದ ಕೊನೇ ಚುನಾವಣೆ. ಹೀಗಾಗಿ ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿಯಾಗಲು ಹೈಕಮಾಂಡ್ ಅವಕಾಶ ನೀಡುವುದಿಲ್ಲ ಎಂದು ಸಂದರ್ಶನದಲ್ಲಿ ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿತ್ತು.