ನಾಳೆ ಬೆಂಗಳೂರಿನಲ್ಲಿ 'ಪ್ರಧಾನಿ ಮೋದಿ' ಸಮಾವೇಶ : 2 ಲಕ್ಷಕ್ಕೂ ಹೆಚ್ಚು ಮಂದಿಗೆ 'ಭರ್ಜರಿ ಊಟ' ; ಮೆನು ಏನು ಗೊತ್ತಾ

ನಾಳೆ ಬೆಂಗಳೂರಿನಲ್ಲಿ 'ಪ್ರಧಾನಿ ಮೋದಿ' ಸಮಾವೇಶ : 2 ಲಕ್ಷಕ್ಕೂ ಹೆಚ್ಚು ಮಂದಿಗೆ 'ಭರ್ಜರಿ ಊಟ' ; ಮೆನು ಏನು ಗೊತ್ತಾ

ಬೆಂಗಳೂರು: ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಸುಗಮ ಸಂಚಾರ ವ್ಯವಸ್ಥೆಗೆ ಅಡಚಣೆಯಾಗದಂತೆ ಹಾಗೂ ಭದ್ರತಾ ದೃಷ್ಟಿಯಿಂದ ವಿಧಾನಸೌಧ, ರಾಜಭವನ ಸೇರಿದಂತೆ ಹಲವು ರಸ್ತೆಗಳಲ್ಲಿ ಸಂಚಾರವನ್ನು ನಿಷೇಧಿಸಲಾಗಿದೆ.

ಇನ್ನೂ, ನಾಳೆ ಏರ್ಪೋಟ್ ಬಳಿ ಸಮಾವೇಶ ನಡೆಯಲಿದೆ. ಈ ಹಿನ್ನೆಲೆ ಭರ್ಜರಿ ತಯಾರಿ ನಡೆಸಲಾಗುತ್ತಿದೆ. ನಾಳೆ ಮೋದಿ ಸಮಾವೇಶಕ್ಕೆ ಬರುವ 2 ಲಕ್ಷಕ್ಕೂ ಹೆಚ್ಚು ಜನರಿಗೆ ಅಡುಗೆ ಸಿದ್ದ ಮಾಡಲಾಗುತ್ತಿದೆ. ಸುಮಾರು 700 ಕ್ಕೂ ಅಧಿಕ ಬಾಣಸಿಗರಿಂದ ಬೆಳಗ್ಗೆ ತಿಂಡಿ ಮತ್ತು ಮಧ್ಯಾಹ್ನ ಊಟಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ತಿಂಡಿಗೆ ಟಮೋಟ ಬಾತ್, ಮೈಸೂರು ಪಾಕ್ ಇದ್ರೆ. ಮಧ್ಯಾಹ್ನದ ಊಟಕ್ಕೆ ಪಲಾವ್, ಮೊಸರು ಬಜ್ಜಿ, ಮೊಸರನ್ನ ಮತ್ತು ಅಕ್ಕಿ ಪಾಯಸ ಮಾಡಲಾಗುತ್ತಿದೆ. . ಬೆಳಗ್ಗೆ 08 ಗಂಟೆಯಿಂದ ತಿಂಡಿ ವ್ಯವಸ್ಥೆಯಿರಲಿದೆ. ಈಗಾಗಲೆ ಏರ್ಪೋಟ್ ಸಮಾವೇಶದ ಬಳಿ ಅಡುಗೆ ತಯಾರಿಯಲ್ಲಿ ಬಾಣಸಿಗರು ನಿರತರಾಗಿದ್ದಾರೆ. ಊಟ ತಿಂಡಿ ಬಡಿಸಲು 150 ಕೌಂಟರ್ ಗಳ ವ್ಯವಸ್ಥೆ ಮಾಡಲಾಗಿದೆ.

ಇನ್ನೂ, ರಾಜಧಾನಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭದ್ರತಾ ದೃಷ್ಟಿಯಿಂದ ನಾಳೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2ರ ವರೆಗೆ ಹಲವು ಕಡೆ ಸಾರ್ವಜನಿಕ ಸಂಚಾರವನ್ನು ನಿರ್ಬಂಧಿಸಿ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ನಗರ ಪೊಲೀಸ್ ಜಂಟಿ ಆಯುಕ್ತ ಬಿ.ಆರ್. ರವಿಕಾಂತೇಗೌಡ ತಿಳಿಸಿದ್ದಾರೆ.

ಮೊದಲು ಶಾಸಕರ ಭವನದಲ್ಲಿ ಕನಕದಾಸ ಮತ್ತು ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಲಿರುವ ಮೋದಿ, ಆನಂತರ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಉದ್ಘಾಟನೆ ಮಾಡಲಿದ್ದಾರೆ. ಬಳಿಕ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟರ್ಮಿನಲ್-2 ಉದ್ಘಾಟ