ನಾಳೆ 'ಶಿವಮೊಗ್ಗದ ಹೊಳಲೂರಿ'ನಲ್ಲಿ ನಿಗದಿಯಾಗಿದ್ದ 'ಕಂದಾಯ ಸಚಿವ'ರ 'ಗ್ರಾಮ ವಾಸ್ತವ್ಯ' ಮುಂದೂಡಿಕೆ

ನಾಳೆ 'ಶಿವಮೊಗ್ಗದ ಹೊಳಲೂರಿ'ನಲ್ಲಿ ನಿಗದಿಯಾಗಿದ್ದ 'ಕಂದಾಯ ಸಚಿವ'ರ 'ಗ್ರಾಮ ವಾಸ್ತವ್ಯ' ಮುಂದೂಡಿಕೆ

ಶಿವಮೊಗ್ಗ : ಶಿವಮೊಗ್ಗ ತಾಲ್ಲೂಕಿನ ಹೊಳಲೂರಿನಲ್ಲಿ ಕಂದಾಯ ಸಚಿವರಾದ ಆರ್.ಅಶೋಕ್ ( Revenue Minister R Ashok ) ಇವರ ಅಧ್ಯಕ್ಷತೆಯಲ್ಲಿ ದಿನಾಂಕ : 28-01-2023 ರಂದು ಏರ್ಪಡಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿರುತ್ತದೆ.

'ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ-ಕಂದಾಯ ಇಲಾಖೆ' ಕಾರ್ಯಕ್ರಮದಡಿ ಕಂದಾಯ ಸಚಿವರಾದ ಆರ್.ಅಶೋಕ್ ಇವರು ಜನವರಿ 28 ರಂದು ಶಿವಮೊಗ್ಗ ತಾಲ್ಲೂಕಿನ ಹೊಳಲೂರು ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ವಾಸ್ತವ್ಯ ಮಾಡಲು ನಿಗದಿಯಾಗಿತ್ತು.

ಈ ಹಿನ್ನೆಲೆಯಲ್ಲಿಯೇ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಎಫ್ ಹೊನ್ನಳ್ಳಿ ಅವರು, ಕಂದಾಯ ಸಚಿವ ಆರ್ ಅಶೋಕ್ ಗ್ರಾಮ ವಾಸ್ತವ್ಯ ಮಾಡಲಿದ್ದಂತ ಹೊಳಲೂರಿಗೆ ಭೇಟಿ ನೀಡಿ, ಸಿದ್ಧತೆಗಳನ್ನು ವೀಕ್ಷಿಸಿದ್ದರು. ಅಲ್ಲದೇ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ನಡೆಯುವ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಕಂದಾಯ ಮತ್ತು ಇತರೆ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಅವರು ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಕುಂದು ಕೊರತೆಗಳನ್ನು ಆಲಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡು ಗ್ರಾಮ ವಾಸ್ತವ್ಯ ಮಾಡುವರು ಎಂದು ಹೇಳಿದ್ದರು.

ಗ್ರಾಮದ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ತಮ್ಮ ಗ್ರಾಮದಲ್ಲಿಯೇ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸಲ್ಲಿಸಿ ಜ.28 ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದ್ದರು. ಆದ್ರೇ ನಾಳೆ ನಿಗದಿಯಾಗಿದ್ದಂತ ಕಂದಾಯ ಸಚಿವ ಆರ್ ಅಶೋಕ್ ಅವರ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ.