ನಿಮ್ಮ ಕಣ್ಣಿನ ದೃಷ್ಟಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ಜಿಂಕೆಯನ್ನು ಗುರುತಿಸಿ!

ನಿಮ್ಮ ಕಣ್ಣಿನ ದೃಷ್ಟಿಗೊಂದು ಸವಾಲು: ಸಾಧ್ಯವಾದ್ರೆ ಈ ಫೋಟೋದಲ್ಲಿರೋ ಜಿಂಕೆಯನ್ನು ಗುರುತಿಸಿ!

ವದೆಹಲಿ: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣ (Social Media) ಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಅದು ಪ್ರಾಣಿ-ಪಕ್ಷಿಗಳಾಗಿರಬಹುದು ಅಥವಾ ವಸ್ತುಗಳನ್ನು ಪತ್ತೆ ಹಚ್ಚುವುದಾಗಿರಬಹುದು. ಆದರೆ, ನೆಟ್ಟಿಗರ ತಲೆಗೆ ಹುಳ ಬಿಡುವುದಂತೂ ನಿಜ.

ಅಂಥದ್ದೇ ಮತ್ತೊಂದು ಫೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.

ಸದ್ಯ ವೈರಲ್​ ಆಗಿರುವ ಫೋಟೋದಲ್ಲಿ ನೀವು ಅರಣ್ಯ ಪ್ರದೇಶವನ್ನು ನೋಡಬಹುದು. ಆದರೆ, ಆ ಫೋಟೋದ ಒಂದು ಭಾಗದಲ್ಲಿ ಜಿಂಕೆ (Deer) ಯೊಂದು ನಿಂತಿದೆ. ಆದರೆ, ಅದನ್ನು ಪತ್ತೆಹಚ್ಚುವುದು ಸುಲಭದ ಮಾತಲ್ಲ. ಏಕೆಂದರೆ, ಅರಣ್ಯ ಪ್ರದೇಶ ಬಣ್ಣ ಮತ್ತು ಜಿಂಕೆ ಬಣ್ಣಕ್ಕೆ ಸಾಮ್ಯತೆ ಇದೆ. ಒಂದನ್ನೊಂದು ಬೆರೆತು ಹೋಗಿವೆ. ನಿಮಗೆ 10 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಆ ಜಿಂಕೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು.

10 ಸೆಕೆಂಡ್​ ಸಮಯದಲ್ಲಿ ನೀವು ಜಿಂಕೆಯನ್ನು ಫೋಟೋದಲ್ಲಿ ಗುರುತಿಸಿದರೆ ನಿಮ್ಮ ಕಣ್ಣಿನ ಸಾಮರ್ಥ್ಯ ಮತ್ತು ಬುದ್ಧಿಮತ್ತೆಗೆ ನೀವೇ ಫುಲ್​ ಮಾರ್ಕ್ಸ್​ ಕೊಟ್ಟುಬಿಡಿ. ಒಂದು ವೇಳೆ ಜಿಂಕೆಯನ್ನು ಗುರುತಿಸಲು ಸಾಧ್ಯವಾಗದೇ, ಎಲ್ಲಿದೆ ಅಂತಾ ಹುಡುಕಾಡುತ್ತಿದ್ದರೆ ಈ ಕೆಳಗಿನ ಚಿತ್ರವನ್ನು ನೋಡಿ ನಿಮಗೆ ಉತ್ತರ ಸಿಗಲಿದೆ. (ಏಜೆನ್ಸೀಸ್​)