ನೇಣು ಬಿಗಿದುಕೊಂಡು ಅಥಣಿ ಪೊಲೀಸ್ ಠಾಣೆಯ 'ASI' ಆತ್ಮಹತ್ಯೆ

ನೇಣು ಬಿಗಿದುಕೊಂಡು ಅಥಣಿ ಪೊಲೀಸ್ ಠಾಣೆಯ 'ASI' ಆತ್ಮಹತ್ಯೆ

ಬೆಳಗಾವಿ : ಅಥಣಿ ಪೊಲೀಸ್ ಠಾಣೆಯ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರನ್ನು 49 ವರ್ಷದ ರಾಮಲಿಂಗ ನಾಯಕ್ ಎಂದು ಗುರುತಿಸಲಾಗಿದೆ.

ಅಥಣಿ ಪೊಲೀಸ್ ಠಾಣೆಯಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಅಥಣಿಯ ಅಳಗವಾಡಿ ಗ್ರಾಮದ ಬೀರೇಶ್ವರ ದೇವಾಲಯದ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ರಾಮಲಿಂಗ ನಾಯಕ್ ಶವ ಪತ್ತೆಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಹಾರುಗೇರಿ ಠಾಣೆ ಪೊಲೀಸರರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.