ನೇಪಾಳದಲ್ಲಿ 6.3 ತೀವ್ರತೆಯ ಭೂಕಂಪನ: ದೆಹಲಿಯಲ್ಲೂ ಭೂಮಿ ಕಂಪಿಸಿದ ಅನುಭವ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬುಧವಾರ(ಇಂದು) ಮುಂಜಾನೆ ಭೂಕಂಪನದ ಅನುಭವವಾಗಿದೆ. ನೇಪಾಳದಲ್ಲಿ ಇಂದು ಮುಂಜಾನೆ 1.57ರ ಸುಮಾರಿಗೆ 6.3 ತೀವ್ರತೆಯ ಭೂಕಂಪವಾಗಿದ್ದು, ದೆಹಲಿಯಲ್ಲೂ ಭೂಕಂಪನದ ಅನುಭವವಾಗಿದೆ.
ಕಳೆದ 24 ಗಂಟೆಗಳಲ್ಲಿ ನೇಪಾಳದ ದೂರದ ಪಶ್ಚಿಮ ಪ್ರದೇಶದಲ್ಲಿ ಮೂರು ಬಾರಿ ಭೂಮಿ ಕಂಪಿಸಿದ ಅನುಭವವಾಗಿದೆ.
'09-11-2022 ರಂದು(ಬುಧವಾರ) ಭೂಕಂಪನವು ಭೂಮಿಯಿಂದ 10 ಕಿಮೀ ಆಳದಲ್ಲಿ 6.6 ತೀವ್ರತೆಯ ಭೂಕಂಪ ಸಂಭವಿಸಿದೆ' ಎಂದು ನ್ಯಾಷನಲ್ ಸೆಂಟರ್ ಫಾರ್ ಸಿಸ್ಮಾಲಜಿ ಟ್ವೀಟ್ ಮಾಡಿದೆ.ಭೂಕಂಪನದಿಂದಾಗ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.