ನ. 1 ರಂದು ನಟ ಪುನೀತ್ ಗೆ ಮರಣೋತ್ತರ 'ಕರ್ನಾಟಕ ರತ್ನ'ಪ್ರಶಸ್ತಿ ಪ್ರದಾನ : ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

ನ. 1 ರಂದು ನಟ ಪುನೀತ್ ಗೆ ಮರಣೋತ್ತರ 'ಕರ್ನಾಟಕ ರತ್ನ'ಪ್ರಶಸ್ತಿ ಪ್ರದಾನ : ಇಂದು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು : ನ.1ರಂದುಕನ್ನಡ ರಾಜ್ಯೋತ್ಸವದ ದಿನ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರಿಗೆ ʼಕರ್ನಾಟಕ ರತ್ನ ಪ್ರಶಸ್ತಿ ʼ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಈ ನಿಟ್ಟಿನಲ್ಲಿ ಇಂದು ಮಧ್ಯಾಹ್ನ 1:30 ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಯಲಿದ್ದು, ಪುನೀತ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿʼ ನೀಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ದಿವಂಗತ. ಪುನೀತ್‌ ರಾಜ್‌ ಕುಮಾರ್‌ ಅವರಿಗೆ ನ.1 ರಂದು ಕರ್ನಾಟಕ ರತ್ನ ಪ್ರಶಸ್ತಿ ನೀಡಲು ತಯಾರಿ ನಡೆಸಲಾಗುತ್ತಿದೆ. ಕರ್ನಾಟಕ ರತ್ನ ಪ್ರಶಸ್ತಿಗೆ ಈಗಾಗಲೇ ಸಣ್ಣ ಸಮಿತಿ ಸಹ ರಚನೆ ಮಾಡಿಕೊಂಡಿದ್ದೇವೆ. ಡಾ. ಪುನೀತ್‌ ಕುಟುಂಬ ಸದಸ್ಯರು ಇರಲಿದ್ದಾರೆ ಎಂದು ಇತ್ತೀಚೆಗಷ್ಟೇ ಸಿಎಂ ಬೊಮ್ಮಾಯಿ ಹೇಳಿದ್ದರು. ರಾಜ್ ಕುಮಾರ್ ಅವರ ಕುಟುಂಬದ ಸದಸ್ಯರು ಸಹ ಸಮಿತಿಯಲ್ಲಿ ಇರುತ್ತಾರೆ. ಎಲ್ಲರೂ ಸೇರಿ ಗೌರವಯುತವಾಗಿ ಪುನೀತ್ ಅವರಿಗೆ ಮರಣೋತ್ತರವಾಗಿ ಪ್ರಶಸ್ತಿಯನ್ನು ನೀಡಲಾಗುತ್ತದೆ ಅಂತ ತಿಳಿಸಿದರು. ಅಂದ ಹಾಗೇ ಈ ಬಾರಿ ಡಾ. ರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಅವರ ಸ್ಮರಣಾರ್ಥ ವಿಶೇಷವಾದ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದು ಹೇಳಿದ್ದರು. ಈ ನಿಟ್ಟಿನಲ್ಲಿ ಸಭೆ ಬಹಳ ಮಹತ್ವ ಪಡೆದುಕೊಂಡಿದೆ.

ಅಕ್ಟೋಬರ್ 29 ರಂದು ಬೆಳಗ್ಗೆ ಕನ್ನಡ ಚಿತ್ರರಂಗದ ಖ್ಯಾತ ನಟ ಅಭಿಮಾನಿಗಳ ನೆಚ್ಚಿನ ಅಪ್ಪು ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಇನ್ನೂ ಕೂಡ ಈ ಘಟನೆಯನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ, ಬಹುಷಃ ಪುನೀತ್ ರಾಜ್ ಕುಮಾರ್ ಅವರ ಸಾವಿಗೆ ಮಿಡಿದಷ್ಟು ಮನಗಳು ಇಡೀ ದೇಶದಲ್ಲಿ ಯಾರ ಸಾವಿಗೆ ಮಿಡಿಯಲಿಲ್ಲ.