ನ.11 ರಂದು 'ಕೆಂಪೇಗೌಡ ಪ್ರತಿಮೆ' ಅನಾವರಣ : ವಿಶೇಷ ವಿಡಿಯೋಗೆ ನಟ, ರಾಕಿಂಗ್ ಸ್ಟಾರ್ ಯಶ್ ಧ್ವನಿ
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.
ಈ ಕಾರ್ಯಕ್ರಮದ ವಿಶೇಷ ವಿಡಿಯೋವೊಂದನ್ನು ಪ್ರದರ್ಶನ ಮಾಡಲಾಗುತ್ತಿದ್ದು, ಕೆಂಪೇಗೌಡರ ಸಾಧನೆ ಕುರಿತು ವಿಡಿಯೂ ಮೂಲಕ ಜನರಿಗೆ ತೋರಿಸಲಾಗುತ್ತಿದೆ. ಇದಕ್ಕೆ ನಟ ರಾಕಿಂಗ್ ಸ್ಟಾರ್ ಯಶ್ ಹಿನ್ನೆಲೆ ಧ್ವನಿ ನೀಡಿದ್ದಾರೆ ಎನ್ನಲಾಗುತ್ತಿದೆ .
ನಾಡಪ್ರಭು ಕೆಂಪೇಗೌಡ ಬೃಹತ್ ಪ್ರತಿಮೆ ಉಸ್ತುವಾರಿಯನ್ನು ಸಚಿವ ಅಶ್ವಥ್ ನಾರಾಯಣ್ ವಹಿಸಿಕೊಂಡಿದ್ದು, ಈ ಹಿನ್ನಲೆ ನಟ ಯಶ್ ಹಿನ್ನೆಲೆ ಧ್ವನಿ ನೀಡಲಿ ಒಪ್ಪಿಕೊಂಡಿದ್ದಾರೆ ಎಂದು ಹೇಳಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರು ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿದ್ದು, ಕೆಂಪೇಗೌಡ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ.ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆ ನಿರ್ಮಿಸಲಾಗಿದ್ದು, ಪ್ರಧಾನಿ ಮೋದಿ ಬೆಂಗಳೂರು ಭೇಟಿ ಕಾರ್ಯಕ್ರಮಕ್ಕೆ ಭರದ ಸಿದ್ದತೆ ನಡೆಸಲಾಗುತ್ತಿದೆ.