ಪಂಚಮಸಾಲಿ ಸಮುದಾಯಕ್ಕೆ 2 ಸಿ, 2ಡಿ ಮೀಸಲಾತಿ : ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್

ಪಂಚಮಸಾಲಿ ಸಮುದಾಯಕ್ಕೆ 2 ಸಿ, 2ಡಿ ಮೀಸಲಾತಿ : ಹೈಕೋರ್ಟ್ ನಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್

ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಸಿ, 2ಡಿ ಮೀಸಲಾತಿ ಸಂಬಂಧ ಕರ್ನಾಟಕ ಹೈಕೋರ್ಟ್ ಯಾಥಾಸ್ಥಿತಿ ಅದೇಶ ತೆರವುಗೊಳಿಸಿ ಅದೇಶ ಹೊರಡಿಸಿದ್ದು, ಈ ಮೂಲಕ ಚುನಾವಣೆ ಹೊತ್ತಲ್ಲಿ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡದಂತೆ ಡಿ.ಜಿ. ರಾಘವೇಂದ್ರ ಎಂಬುವರು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಿದ ಹೈಕೋರ್ಟ್, 2 ಎ ಮೀಸಲಾತಿಯನ್ನು ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ ಗೆ ಕೇಂದ್ರ ಸರ್ಕಾರದ ಸಾಲಿಸಿಟರ್ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿದೆ. ಹೀಗಾಗಿ ಪಂಚಮಸಾಲಿ ಸಮುದಾಯಕ್ಕೆ 2 ಸಿ, 2 ಡಿ ಮೀಸಲಾತಿ ನೀಡಲು ಅಡ್ಡಿ ಇಲ್ಲ.

ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಬದಲಾವಣೆ ಮಾಡದಂತೆ ಕೇಂದ್ರ ಸರ್ಕಾರಕ್ಕೆ ಲಿಖಿತ ಹೇಳಿಕೆ ಸಲ್ಲಿಸಲು ಸೂಚನೆ ನೀಡಲಾಗಿದೆ. ಕೇಂದ್ರ ಸರ್ಕಾರದ ಭರವಸೆ ಹಿನ್ನೆಲೆಯಲ್ಲಿ ಮಧ್ಯಂತರ ಆದೇಶ ತೆರವು.ಯಾವುದೇ ಕ್ರಮ ಹೈಕೋರ್ಟ ಅಂತಿಮ ತೀರ್ಪಿಗೆ ಬದ್ಧವಾಗಿರಬೇಕೆಂದು ತಿಳಿಸಿದೆ.