ಪಡಿತರ ಚೀಟಿದಾರರಿಗೆ ಮತ್ತೊಂದು ಗುಡ್ ನ್ಯೂಸ್ : ನ್ಯಾಯಬೆಲೆ ಅಂಗಡಿಗಳಲ್ಲೇ ಸಿಗಲಿವೆ ಈ ಎಲ್ಲಾ ಸೇವೆಗಳು!
ಬೆಂಗಳೂರು : ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರವು ಮತ್ತೊಂದು ಸಿಹಿಸುದ್ದಿ ನೀಡಿದ್ದು, ಬಿಪಿಎಲ್ (BPL), ಎಪಿಎಲ್ (APL) ಕಾರ್ಡ್ ದಾರರಿಗೆ ಇನ್ಮುಂದೆ ನ್ಯಾಯಬೆಲೆ ಅಂಗಡಿಗಳಲ್ಲೇ ಗ್ಯಾಸ್ ಸಿಲಿಂಡರ್ ಖರೀದಿ ಸೇರಿ ಹಲವು ಸೇವೆಗಳು ಲಭ್ಯವಾಗಲಿವೆ.
ಹೌದು, ನ್ಯಾಯಬೆಲೆ ಅಂಗಡಿಗಳಲ್ಲಿ ಇನ್ಮುಂದೆ ಪಡಿತರ ಚೀಟಿದಾರರಿಗೆ ಗ್ಯಾಸ್ ಸಿಲಿಂಡರ್ ಖರೀದಿ, ಬ್ಯಾಂಕ್ ಖಾತೆ ತೆರೆಯುವುದು, ಇಂಟರ್ ನೆಟ್ ಸೇವೆ ಪಡೆಯುವ ವ್ಯವಸ್ಥೆ ಶೀಘ್ರವೇ ಜಾರಿಯಾಗಲಿದೆ.
ಆಹಾರ ಇಲಾಖೆಯು ನ್ಯಾಯಬೆಲೆ ಅಂಗಡಿಗಳ ಮೂಲಕ ಗ್ಯಾಸ್ ಸಿಲಿಂಡರ್, ದಿನಬಳಕೆ ವಸ್ತುಗಳು, ಅಂಚೆ ಇಲಾಖೆಯ ಮೂಲಕ ಬ್ಯಾಂಕ್ ಖಾತೆ ಓಪನ್ ಹಾಗೂ ಎರಡು ರೂ.ಗೆ ಇಂಟರ್ ನೆಟ್ ಸೌಲಭ್ಯ ಸೇರಿದಂತೆ ಹಲವು ಸೇವೆಗಳನ್ನು ಒದಗಿಸಲು ಮುಂದಾಗಿದೆ.
ಇನ್ನು ರಾಜ್ಯದಲ್ಲಿ 1,15,79,081 ಬಿಪಿಎಲ್, 23,87,956 ಎಪಿಎಲ್ ಹಾಗೂ 10,90,563 ಅಂತ್ಯೋದಯ ಸೇರಿ ಒಟ್ಟು 1,50,57,600 ಪಡಿತರ ಚೀಟಿದಾರರಿಗೆ ಪ್ರತಿತಿಂಗಳು 20,168 ನ್ಯಾಯಬೆಲೆ ಅಂಗಡಿಗಳು ಪಡಿತರ ವಿತರಣೆ ಮಾಡುತ್ತಿವೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳಿಗೆ ಜನರ ಅಲೆದಾಟ ತಪ್ಪಿಸಿ ಸಮೀಪದ ನ್ಯಾಯಬೆಲೆ ಅಂಗಡಿಗಳಲ್ಲೇ ಅಗತ್ಯ ಸೇವೆಗಳನ್ನು ಒದಗಿಸಲು ಆಹಾರ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ.