ಪಡಿತರ ವಿತರಿಸದಿದ್ದರೆ ನ್ಯಾಯಬೆಲೆ ಅಂಗಡಿ ಪರವಾನಗಿ ರದ್ದು: ಹೈಕೋರ್ಟ್

ಬೆಂಗಳೂರು: ಅಕ್ರಮ ಎಸಗಿದ ನ್ಯಾಯಬೆಲೆ ಅಂಗಡಿ ಲೈಸೆನ್ಸ್ ರದ್ದುಗೊಳಿಸಿ ಆದೇಶ ಹೊರಡಿಸುವ ಮೂಲಕ ರಾಜ್ಯ ಸರ್ಕಾರದ ಕ್ರಮವನ್ನು ಹೈಕೋರ್ಟ್ ವಿಭಾಗೀಯ ಪೀಠ ಎತ್ತಿ ಹಿಡಿದಿದೆ. ಸಿಜೆ ಪಿ.ಬಿ ವರಾಳೆ, ನ್ಯಾ. ಅಶೋಕ್ಎಸ್ ಕಿಣಗಿರಿದ್ದ ಪೀಠ ಈ ಅಭಿಪ್ರಾಯ ವ್ಯಕ್ತ ಪಡಿಸಿದ್ದು, ರಾಮನಗರದ ಸಂಜೀವಯ್ಯ ಎಂಬುವವರ ನ್ಯಾಯಬೆಲೆ ಅಂಗಡಿ ಲೈಸನ್ಸ್ ರದ್ದುಗೊಳಿಸಿದೆ. ಈ ಮೂಲಕ ರಾಮನಗರ ಜಿಲ್ಲಾಡಳಿತದ ಕ್ರಮ ಹೈಕೋರ್ಟ್ ಎತ್ತಿ ಹಿಡಿದಿದೆ.