ಪತ್ನಿಯ ಕೊಲೆ ಮಾಡಿ ಶವ ಕತ್ತರಿಸಿದ ಪ್ರಕರಣ: ಲೋಕಸಭೆಯಲ್ಲಿ ಗುಡುಗಿದ ಬಿಜೆಪಿ ಸಂಸದ

ಬುಡಕಟ್ಟು ಸಮುದಾಯಕ್ಕೆ ಸೇರಿದ 22 ವರ್ಷದ ಮಹಿಳೆಯನ್ನು ಆಕೆಯ ಪತಿಯೇ ಕೊಲೆ ಮಾಡಿ ಶವವನ್ನು 50 ತುಂಡುಗಳಾಗಿ ಕತ್ತರಿಸಿದ ಪ್ರಕರಣ ಜಾರ್ಖಂಡ್‌ನಲ್ಲಿ ವರದಿಯಾಗಿತ್ತು. ಲೋಕಸಭೆಯಲ್ಲಿ ಈ ವಿಚಾರವನ್ನು ಇಂದು ಪ್ರಸ್ತಾಪಿಸಿರುವ ಬಿಜೆಪಿ ಸಂಸದ ನಿಶಿಕಾಂತ್ ದುಬೇ ಅವರು, ಜಾರ್ಖಂಡ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಕೊಲೆಗಾರರಿಗೆ ಸರ್ಕಾರದ ಬೆಂಬಲವಿದೆ ಎಂದು ಕಿಡಿಕಾರಿದ್ದಾರೆ. 'ಬಾಂಗ್ಲಾದ ನುಸುಳುಕೋರರು ನನ್ನ ಕ್ಷೇತ್ರವನ್ನು ವಶಪಡಿಸಿಕೊಂಡಿದ್ದಾರೆ ಎಂದು ಪದೇ ಪದೇ ಹೇಳುತ್ತಿದ್ದೇನೆ' ಎಂದು ಆರೋಪಿಸಿದ್ದಾರೆ.