ಪರಿಷತ್‍ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ವರಿಷ್ಠರಲ್ಲಿ ಸಿಎಂ ಮನವಿ

ಪರಿಷತ್‍ ಚುನಾವಣೆಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಗೆ ವರಿಷ್ಠರಲ್ಲಿ ಸಿಎಂ ಮನವಿ

ಬೆಂಗಳೂರು,ನ.12- ಮಿನಿ ಮಹಾಸಮರವೆಂದೇ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿರುವ ರಾಜ್ಯದ 25 ವಿಧಾನಪರಿಷತ್‍ನ ಚುನಾವಣೆಗೆ ತಕ್ಷಣವೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವರಿಷ್ಠರಿಗೆ ಮನವಿ ಮಾಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆ ನವದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾದ ಸಂದರ್ಭದಲ್ಲಿ 25 ಕ್ಷೇತ್ರಗಳ ಪಟ್ಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.

ವಿಳಂಬ ಮಾಡಿದಷ್ಟು ಆಕಾಂಕ್ಷಿಗಳ ಪಟ್ಟಿ ಹೆಚ್ಚಾಗಲಿದೆ. ಅಭ್ಯರ್ಥಿಯನ್ನು ಘೋಷಣೆ ಮಾಡಿದರೆ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಲು ಅನುಕೂಲವಾಗುತ್ತದೆ. ಸಮಯದ ಅಭಾವವಿರುವುದರಿಂದ ವಿಳಂಬ ಮಾಡದೆ ಅಭ್ಯರ್ಥಿ ಪಟ್ಟಿಯನ್ನು ಕಳುಹಿಸಿಕೊಡುವಂತೆ ಕೋರಿದ್ದಾರೆ.

ಪ್ರಚಾರಕ್ಕೆ ಈ ಬಾರಿ ಸಮಯಾವಕಾಶವು ಕಡಿಮೆ ಇರುವುದರಿಂದ ವಿಳಂಬ ಮಾಡಿದಷ್ಟು ಅಸಮಾಧಾನ, ಭಿನ್ನಮತ ಆರಂಭವಾಗುತ್ತದೆ. ಇದಕ್ಕೆ ಅವಕಾಶ ಕೊಡದೆ ಎಷ್ಟು ಸಾಧ್ಯವೋ ಅಷ್ಟು ಬೇಗ ಪಟ್ಟಿಯನ್ನು ರಾಜ್ಯ ಘಟಕಕ್ಕೆ ಕಳುಹಿಸಿಕೊಡುವಂತೆ ಮನವಿ ಮಾಡಿಕೊಂಡಿರುವುದಾಗಿ ಪಕ್ಷದ ಮೂಲಗಳು ತಿಳಿಸಿವೆ.

ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ಜೊತೆ ಚರ್ಚಿಸಿ ಆದಷ್ಟು ಶೀಘ್ರ ಪಟ್ಟಿಯನ್ನು ಬಿಡುಗಡೆ ಮಾಡುತ್ತೇವೆ ಎಂದು ವರಿಷ್ಠರು ಸಿಎಂಗೆ ಹೇಳಿದ್ದಾರೆ ಎಂದು ತಿಳಿದುಬಂದಿದೆ.

ಪಕ್ಷದಲ್ಲೇ ಅಸಮಾಧಾನ:
ಹಾಲೀ ಹೊಂದಿರುವ ಆರು ಕ್ಷೇತ್ರಕ್ಕಿಂತ ಹೆಚ್ಚು ಸ್ಥಾನವನ್ನು ಗೆಲ್ಲುವ ಅವಕಾಶವಿರುವ ಬಿಜೆಪಿ, ಎರಡು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ಇದಕ್ಕೆ ಪಕ್ಷದೊಳಗೆಯೇ ಅಪಸ್ವರ ಜೋರಾಗಿ ಕೇಳಿ ಬರುತ್ತಿದೆ. ಬೀದರ್ 1, ಕಲಬುರಗಿ 1, ವಿಜಯಪುರ 2, ಬೆಳಗಾವಿ 2, ಉತ್ತರ ಕನ್ನಡ 1, ಧಾರವಾಡ 2, ರಾಯಚೂರು 1, ಬಳ್ಳಾರಿ 1, ಚಿತ್ರದುರ್ಗ 1, ಶಿವಮೊಗ್ಗ 1, ದಕ್ಷಿಣ ಕನ್ನಡ 2, ಚಿಕ್ಕಮಗಳೂರು 1, ಹಾಸನ 1, ತುಮಕೂರು 1, ಮಂಡ್ಯ 1, ಬೆಂಗಳೂರು 1, ಬೆಂಗಳೂರು ಗ್ರಾಮಾಂತರ 1, ಕೋಲಾರ 1, ಕೊಡಗು 1, ಮೈಸೂರು 2 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.

ಇದರಲ್ಲಿ, ವಿಜಯಪುರ, ಬೆಳಗಾವಿ, ಧಾರವಾಡ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಯಲ್ಲಿ ದ್ವಿಕ್ಷೇತ್ರ ಸ್ಪರ್ಧೆ ಇರಲಿದೆ. ದ್ವಿಕ್ಷೇತ್ರಗಳಲ್ಲಿ ಎರಡೂ ಕಡೆ ಸ್ಪರ್ಧೆ ಮಾಡದೇ ಇರುವ ನಿರ್ಧಾರಕ್ಕೆ ಬಿಜೆಪಿ ಬಂದಿದೆ.

ದ್ವಿಕ್ಷೇತ್ರ ಇರುವ ಕಡೆ ಇಬ್ಬರು ಅಭ್ಯರ್ಥಿಗಳನ್ನು ಹಾಕಿದರೆ, ಮತ ವಿಭಜನೆಯಾಗಿ ಎರಡೂ ಕ್ಷೇತ್ರ ಸೋಲುವ ಸಾಧ್ಯತೆಯಿದೆ. ಹಾಗಾಗಿ, ಒಂದು ಕ್ಷೇತ್ರದಲ್ಲಿ ಮಾತ್ರ ಸ್ರ್ಪಸುವ ನಿರ್ಧಾರಕ್ಕೆ ಬಿಜೆಪಿಯ ರಾಜ್ಯ ನಾಯಕರು ಬಂದಿದ್ದಾರೆ ಎನ್ನುವ ಮಾಹಿತಿಯಿದೆ. ಆದರೆ, ಖಚಿತವಾಗಿ ಗೆಲ್ಲಲೇ ಬಹುದು ಎಂದು ಸಂಬಂಧ ಪಟ್ಟ ಜಿಲ್ಲೆಯ ಬಿಜೆಪಿ ಘಟಕ ಶಿಫಾರಸು ಮಾಡಿದರೆ, ಈ ನಿರ್ಧಾರದಿಂದ ಹಿಂದಕ್ಕೆ ಸರಿಯುವ ಸಾಧ್ಯತೆಯೂ ಇದೆ.

ಬಿಜೆಪಿಯ ಕೋರ್ ಕಮಿಟಿ ತಮ್ಮ ನಿರ್ಧಾರವನ್ನು ಬದಲಾಯಿಸಬೇಕು. ಬಿಜೆಪಿಯ ಈ ನಿರ್ಧಾರ ಪಕ್ಷದ ಮುಖಂಡರಿಗೆ ಸಹ್ಯವಾಗಿಲ್ಲ. ¿ರಾಜ್ಯದಲ್ಲಿ ನಮ್ಮದೇ ಸರಕಾರ ಇರುವುದರಿಂದ ಗೆಲ್ಲುವುದು ಕಷ್ಟವೇನೂ ಅಲ್ಲ. ಆತ್ಮವಿಶ್ವಾಸದಿಂದ ಮತ್ತು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಸಾಕು. ಒಂದು ಕ್ಷೇತ್ರದಲ್ಲಿ ಮಾತ್ರ ಸ್ರ್ಪಸಿದರೆ ಕಾಂಗ್ರೆಸ್ ಮತ್ತು ಜೆಡಿಎಸ್ಸಿಗೆ ನಾವೇ ಅನುಕೂಲ ಮಾಡಿಕೊಟ್ಟಂತಾಗುತ್ತದೆ. ಬಿಜೆಪಿಯ ಕೋರ್ ಕಮಿಟಿ ತಮ್ಮ ನಿರ್ಧಾರವನ್ನು ಬದಲಾಯಿಸಬೇಕು¿ಎಂದು ಜಿಲ್ಲಾ ಘಟಕದ ಅಧ್ಯಕ್ಷರೊಬ್ಬರು ಹೇಳಿದ್ದಾರೆ.

ಬಿಜೆಪಿ ತೆಗೆದುಕೊಂಡ ಇನ್ನೊಂದು ನಿರ್ಧಾರವೇನಂದರೆ, ಒಂದೇ ಕುಟುಂಬದ ಇನ್ನೊಂದು ಸದಸ್ಯರಿಗೆ ಟಿಕೆಟ್ ನೀಡದಿರಲು ನಿರ್ಧರಿಸಲಾಗಿದೆ ಎನ್ನುವ ಮಾತಿದೆ. ಸಂಸದ, ಶಾಸಕ, ಸಚಿವ ಸ್ಥಾನವನ್ನು ಹೊಂದಿರುವವರ ಕುಟುಂಬದ ಸದಸ್ಯರಿಗೆ ಟಿಕೆಟ್ ನೀಡಲಾಗುವುದಿಲ್ಲ. ಆ ಮೂಲಕ, ವಂಶಪಾರಂಪರ್ಯ ರಾಜಕಾರಣಕ್ಕೆ ಸಂಪೂರ್ಣ ತಿಲಾಂಜಲಿ ಹಾಡುವ ನಿರ್ಧಾರಕ್ಕೆ ಬಿಜೆಪಿಯ ವರಿಷ್ಠರು ಬಂದಿದ್ದಾರೆ ಎನ್ನುವ ಮಾಹಿತಿಯಿದೆ.

ಕಾಂಗ್ರೆಸ್ಸಿನ ಹದಿಮೂರು, ಬಿಜೆಪಿಯ ಆರು, ಜೆಡಿಎಸ್ಸಿನ ನಾಲ್ಕು ಮತ್ತು ಇಬ್ಬರು ಪಕ್ಷೇತರ ಶಾಸಕರ ಸೇವಾ ಅವ ಜನವರಿ 5, 2022ರಂದು ಮುಕ್ತಾಯಗೊಳ್ಳಲಿದೆ. ಇದೇ ಬರುವ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 14 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.