ಪಶ್ಚಿಮ ಘಟ್ಟದಲ್ಲಿ ಮತ್ತೆ ಭೂಕುಸಿತ ಭೀತಿ: ಜನರಿಗೆ ಹೆಚ್ಚಿದ ಆತಂಕ

ಪಶ್ಚಿಮ ಘಟ್ಟದಲ್ಲಿ ಮತ್ತೆ ಭೂಕುಸಿತ ಭೀತಿ: ಜನರಿಗೆ ಹೆಚ್ಚಿದ ಆತಂಕ

ಕಾರವಾರ: ಪಶ್ಚಿಮ ಘಟದಲ್ಲಿ ಮತ್ತೆ ಭೂಕುಸಿತ ಭೀತಿ ಶುರುವಾಗಿದೆ. ಕಳೆದ ಬಾರಿ ಮಳೆಯಿಂದ ನಿರಂತರವಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಭೂಕುಸಿತವಾಗಿತ್ತು.

ಇದರಿಂದ ಅನೇಕರು ಜನರು ಮನೆಯನ್ನು ಕಳೆದುಕೊಂಡಿದ್ದರು.

ಕಾರವಾರ, ಭಟ್ಕಳ, ಕುಮಟಾ, ಶಿರಸಿ ಭಾಗದಲ್ಲಿ ಭೂಕುಸಿತ ಉಂಟಾಗಿತ್ತು. ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಕಳೆದ 3 ವರ್ಷಗಳಿಂದ ಉತ್ತರ ಕನ್ನಡ ಭಾಗದಲ್ಲಿ ನಿರಂತರ ಅಧ್ಯಯನ ಕೈಗೊಂಡಿದೆ. ಕಳೆದ ವಾರ ಜಿಲ್ಲಾಡಳಿತಕ್ಕೆ ಸಲ್ಲಿಸಿದ ವರದಿಯಲ್ಲಿ ಮತ್ತೆ ಭೂ ಕುಸಿತವಾಗುವ ಎಚ್ಚರಿಕೆಯನ್ನು ನೀಡಿದೆ.

ಭೂ ಕುಸಿತಕ್ಕೆ ಹೆದ್ದಾರಿ ಅಗಲೀಕರಣಕ್ಕೆ ಅವೈಜ್ಞಾನಿಕ ಗುಡ್ಡ ಕೊರೆತ, ಅರಣ್ಯನಾಶ, ಅವೈಜ್ಞಾನಿಕ ರಸ್ತೆ ನಿರ್ಮಾಣ ಕಾರಣ ಅಂತ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ವರದಿ ನೀಡಿದೆ. ಘಟ್ಟ ಪ್ರದೇಶದ ಮಣ್ಣಿನ ಪದರ ಸಡಿಲವಾಗಿದ್ದು, ಅರಣ್ಯ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿಗೆ ತಡೆಯೊಡ್ಡದಿದ್ದರೇ ಮತ್ತೆ ಭೂಕುಸಿತವಾಗಿ ದೊಡ್ಡ ಹಾನಿ ಸಂಭವಿಸುವ ಎಚ್ಚರಿಕೆ ನೀಡಿದೆ.ಅರಣ್ಯ ಒತ್ತುವರಿಯಿಂದ 2017ರಲ್ಲಿ 236 ಹೆಕ್ಟೇರ್ ಅರಣ್ಯನಾಶವಾಗಿದೆ.