ಪಶ್ಚಿಮ ಬಂಗಾಳದ ಬುರ್ದ್ವಾನ್ ನಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ ಪಲ್ಟಿ : ಓರ್ವ ಸಾವು, 40 ಪ್ರಯಣಿಕರಿಗೆ ಗಾಯ

ಪಶ್ಚಿಮ ಬಂಗಾಳದ ಬುರ್ದ್ವಾನ್ ನಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ ಪಲ್ಟಿ : ಓರ್ವ ಸಾವು, 40 ಪ್ರಯಣಿಕರಿಗೆ ಗಾಯ

ಶ್ಚಿಮ ಬಂಗಾಳದ : ಪಶ್ಚಿಮ ಬಂಗಾಳದ ಬುರ್ದ್ವಾನ್‌ನ ಕತ್ವಾದಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಒಬ್ಬರು ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚಿನ ಪ್ರಯಾಣಿಕರು ಗಾಯಗೊಂಡಿರುವ ಘಟನೆ ನಡೆದಿದೆ.

ಇಂದು ಸಂಜೆ ಬಸ್ ಬುರ್ದ್ವಾನ್ ಪಟ್ಟಣದ ಕಡೆಗೆ ಹೋಗುತ್ತಿತ್ತು. ಅಪಘಾತದಲ್ಲಿ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದು, ಗಾಯಗೊಂಡವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

ಈ ಭೀಕರ ಅಪಘಾತ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಬಸ್ ಮೇಲೆ ಪ್ರಯಾಣಿಕರು ಕುಳಿತಿರುವುದು ಕಂಡುಬಂದಿದೆ.

ಅಪಘಾತದಲ್ಲಿ ಗಾಯಗೊಂಡವರಲ್ಲಿ ಹಲವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.