ಪಿಎಸ್‌ಐ ಹಗರಣ ಮುಚ್ಚಿಹಾಕಲು ಗೃಹ ಸಚಿವರಿಂದ ಪ್ರಯತ್ನ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಶಾಸಕರು, ಹಿರಿಯ ಅಧಿಕಾರಿಗಳು ಶಾಮೀಲಾಗಿರುವ ಸಾಕ್ಷ್ಯಗಳಿದ್ದರೂ ತನಿಖೆ ನಡೆಯುತ್ತಿಲ್ಲ. ಪ್ರಭಾವಿಗಳಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ರಕ್ಷಣೆ ನೀಡುತ್ತಿದ್ದಾರೆ ಎಂದು ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ. ತಾಂತ್ರಿ ಕಾರಣದಿಂದ ಆರೋಪಿಗಳಿಗೆ ಜಾಮೀನು ದೊರಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ತನಿಖೆಯಲ್ಲಿನ ವೈಫಲ್ಯದ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.