`ಪೇ ಸಿಎಂ ಪೋಸ್ಟರ್' ಅಂಟಿಸಿದ ಪ್ರಕರಣ : ಕೆಪಿಸಿಸಿ ಸದಸ್ಯರಿಗೆ `ಸಿಸಿಬಿ'ಯಿಂದ 3 ನೇ ನೋಟಿಸ್ ಜಾರಿ
ಬೆಂಗಳೂರು : ಪೇ ಸಿಎಂ ಪೋಸ್ಟರ್ ಅಂಟಿಸಿದ ಪ್ರಕರಣ ಸಂಬಂಧ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಟೀಂ ಸದಸ್ಯರಿಗೆ ಸಿಸಿಬಿ ಅಧಿಕಾರಿಗಳು ಮತ್ತೊಂದು ನೋಟಿಸ್ ನೀಡಿದ್ದಾರೆ.ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಡೆಸಿದ್ದ ಪೇ ಸಿಎಂ ಅಭಿಯಾನದಡಿ ನಗರದ ಹಲವಡೆ ಪೋಸ್ಟರ್ ಅಂಟಿಸಿದ್ದ ಪ್ರಕರಣ ಸಂಬಂಧ ಕೇಂದ್ರ ಅಪರಾಧ ವಿಭಾಗದ ಪೊಲೀಸರು ವಿಚಾರಣೆ ಆರಂಭಿಸಿದ್ದಾರೆ. ಈಗಾ
ಪೇ ಸಿಎಂ ಪೋಸ್ಟರ್ ಅಂಟಿಸಿದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಸಾರ್ವಜನಿಕ ಸ್ಥಳ ವಿರೂಪಗೊಳಿಸಿದ ಆರೋಪದಡಿ ಸದಾಶಿವನಗರ, ಶೇಷಾದ್ರಿಪುರ, ಹೈಗ್ರೌಂಡ್ಸ್ ಪೊಲೀಸ್ ಠಾಣೆ, ಆರ್.ಟಿ.ನಗರ, ಜೆ.ಸಿ. ನಗರ ಹಾಗೂ ಸಂಜಯನಗರ ಪೊಲೀಸ್ ಠಾಣೆಯಲ್ಲಿ ಪೋಸ್ಟರ್ ಅಂಟಿಸಿದವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಗಲೇ ಎರಡು ಬಾರಿ ನೋಟಿಸ್ ನೀಡಲಾಗಿದ್ದು, ಕೆಲವರು ಗೈರಾದ ಹಿನ್ನೆಲೆಯಲ್ಲಿ ಮತ್ತೊಮ್ಮೆ ನೋಟಿಸ್ ಜಾರಿ ಮಾಡಲಾಗಿದೆ.