ಪ್ರತಿ ಹಿಂದೂಗಳ ಮನೆಯಲ್ಲಿ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು: ಹೊಸ ವಿವಾದ ಸೃಷ್ಟಿಸಿದ ಪ್ರಮೋದ್ ಮುತಾಲಿಕ್
ಕಲಬುರಗಿ: ಇತ್ತೀಚೆಗೆ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸಾಕಷ್ಟು ವಿವಾದಾತ್ಮ ಹೇಳಿಕೆ ಮೂಲಕ ಸುದ್ದಿಯಲ್ಲಿದ್ದಾರೆ. ಇದೀಗ ಕಲಬುರಗಿಯಲ್ಲಿ ನಡೆದ ಸಮಾವೇಶವೊಂದರಲ್ಲಿ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಇದೀಗ ಕಲಬುರಗಿಯಲ್ಲಿ ಪ್ರತಿಯೊಬ್ಬ ಹಿಂದೂ ಮನೆಯಲ್ಲೂ ಕಾಣುವ ರೀತಿಯಲ್ಲೇ ತಲ್ವಾರ್ ಇಡಬೇಕು ಎಂದು ಪ್ರಚೋದನಕಾರಿ ಹೇಳಿಕೆ ಹೇಳಿದ್ದಾರೆ.ನಿನ್ನೆ ಯಡ್ರಾಮಿಯಲ್ಲಿ ನಡೆದ ಹಿಂದೂ ಸಂತ ಸಮಾವೇಶದಲ್ಲಿ ಮಾತನಾಡಿದ ಅವರು, ನಾವೆಲ್ಲರೂ ಮೊದಲು ಆಯುಧಗಳನ್ನು ಪೂಜೆ ಮಾಡುತ್ತಿದ್ದೀವಿ. ದೀಗ ಪುಸ್ತಕ, ಪೆನ್ನು, ವಾಹನಗಳನ್ನು ಪೂಜೆ ಮಾಡುತ್ತಿದ್ದೇವೆ. ಪೊಲೀಸರು, ಪೊಲೀಸ್ ಠಾಣೆಯಲ್ಲಿ ಎಫ್ಐಆರ್ಗೆ ಪೂಜೆ ಮಾಡಲ್ಲ. ಪೊಲೀಸ್ ಠಾಣೆಯಲ್ಲಿ ಪೊಲೀಸರು ಬಂದೂಕಿಗೆ ಪೂಜೆ ಮಾಡಲ್ವಾ? ಹೀಗಾಗಿ ಇನ್ನುಮುಂದೆ ತಲ್ವಾರ್, ಚಾಕು, ಕೊಡಲಿ ಇಟ್ಟು ಪೂಜೆ ಮಾಡಬೇಕು. ಮನೆಯಲ್ಲಿ ಒಂದು ತಲ್ವಾರ್ ಇಡುವುದು ಅಪರಾಧವಲ್ಲ ಎಂದರು.