ಪ್ರಧಾನಿ ಮೋದಿಗೆ ನಾನು ಕೃತಜ್ಞನಾಗಿದ್ದೇನೆ: ಹೆಚ್‌.ಡಿ.ದೇವೇಗೌಡ

ಪ್ರಧಾನಿ ಮೋದಿಗೆ ನಾನು ಕೃತಜ್ಞನಾಗಿದ್ದೇನೆ: ಹೆಚ್‌.ಡಿ.ದೇವೇಗೌಡ

ಜಿ20 ಶೃಂಗಸಭೆಯ ಭಾರತದ ಅಧ್ಯಕ್ಷತೆ ಹಿನ್ನೆಲೆ ನಡೆದ ಸರ್ವಪಕ್ಷ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ ನನ್ನ ಆರೋಗ್ಯ ವಿಚಾರಿಸಿದ್ದಾಗಿ ಪ್ರಧಾನಿ ಅವರಿಗೆ ನಾನು ಕೃತಜ್ಞನಾಗಿದ್ದೇನೆ ಎಂದು ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ಹೇಳಿದ್ದಾರೆ. ಪ್ರಧಾನಿ ಜೊತೆಗಿನ ಫೋಟೋ ಟ್ವೀಟ್‌ ಮಾಡಿರುವ ಅವರು, ಜಗತ್ತನ್ನು ಒಂದೇ ಕುಟುಂಬವಾಗಿ ನೋಡುವುದು ಒಳ್ಳೆಯ ವಿಷಯಗಳ ಆರಂಭ. ಜಿ20 ಒಕ್ಕೂಟವನ್ನು ಮುನ್ನಡೆಸುವ ಅವಕಾಶ ಲಭಿಸಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ.