ಪ್ರಧಾನಿ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ : ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ 2 ವರ್ಷ ಜೈಲು ಶಿಕ್ಷೆ ನೀಡಿ ಸೂರತ್ ಕೋರ್ಟ್ ಆದೇಶ ನೀಡಿದೆ.
2019 ರಲ್ಲಿ ಕರ್ನಾಟಕದಲ್ಲಿ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದರು.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ಜಿಲ್ಲಾ ನ್ಯಾಯಾಲಯ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ನಂತರ ಅವರಿಗೆ ನ್ಯಾಯಾಲಯ ಜಾಮೀನು ನೀಡಿತು.