ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ ವಿಚಾರ; ಕೊಪ್ಪಳದಲ್ಲಿ ಯುವಕನ ಮನೆಗೆ ಬೀಗ
ಕೊಪ್ಪಳ: ನಿನ್ನೆ ದಾವಣಗೆರೆಗೆ ಪ್ರಧಾನಿ ಮೋದಿ ಆಗಮಿಸಿದ್ದರು, ಈ ಹಿನ್ನೆಲೆಯಲ್ಲಿ ಮೋದಿ ಭದ್ರತೆಯಲ್ಲಿ ಲೋಪ ಕಂಡುಬಂದಿತ್ತು.ಈ ವಿಚಾರಕ್ಕೆ ಸಂಬಂಧಿಸಿದಂತೆ ಕೊಪ್ಪಳ ತಾಲೂಕಿನ ಗುಡ್ಲಾನೂರಿನಲ್ಲಿರುವ ಯುವಕನ ಮನೆಗೆ ಬೀಗ ಹಾಕಲಾಗಿದೆ.
ಬಸವರಾಜ ಎಂಬಾತ ಪ್ರತಿನಿತ್ಯ ಕುಡಿದುಕೊಂಡು ಬಂದು ಗಲಾಟೆ ಮಾಡುತ್ತಿದ್ದ. ಇದರಿಂದ ಬೇಸತ್ತ ಗ್ರಾಮಸ್ಥರು ಬಸವರಾಜ ಮನೆಗೆ ಬೀಗ ಹಾಕಿದ್ದಾರೆ.
ಘಟನೆ ಹಿನ್ನೆಲೆ?
ನಿನ್ನೆ ದಾವಣಗೆರೆಯಲ್ಲಿ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜನರು ಬಸ್ಸಿನಲ್ಲಿ ಬಂದಿದ್ದರು. ಈ ವೇಳೆ ಅಲ್ಲಿ ಮೋದಿ ರೋಡ್ ಶೋ ನಡೆಸುತ್ತಿದ್ದ ವೇಳೆ ಮೋದಿ ವಾಹನದ ಬಳಿ ನುಗ್ಗಲು ಯತ್ನಿಸಿದ್ದಾನೆ. ತಕ್ಷಣವೇ ಆತನನ್ನು ಎಡಿಜಿಪಿ ಅಲೋಕ್ ಕುಮಾರ್ ಹಾಗೂ ಎಸ್‍ಪಿಜಿ ಅಧಿಕಾರಿಗಳು ತಡೆದಿದ್ದಾರೆ. ನಂತರ ಆತನನ್ನು ತಡೆದು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದರು
ಪ್ರಧಾನಿ ಮೋದಿ ಭದ್ರತೆಯಲ್ಲಿ ಮತ್ತೆ ಲೋಪ
ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆ ಮತ್ತೊಮ್ಮೆ ಉಲ್ಲಂಘನೆಯಾಗಿದ್ದು, ಇಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ರ್ಯಾಲಿಯಲ್ಲಿ ಭದ್ರತಾ ಉಲ್ಲಂಘನೆಯಾಗಿದೆ. ಮೂರು ತಿಂಗಳಲ್ಲಿ ಎರಡನೇ ಬಾರಿಗೆ ಪ್ರಧಾನಿಯ ಭದ್ರತೆಯಲ್ಲಿ ಕೋಲಾಹಲ ಉಂಟಾಗಿದೆ. ಪ್ರಧಾನಿ ಕಡೆಗೆ ಓಡಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ್ದರು. ಸ್ಥಳದಲ್ಲಿ ಪೊಲೀಸ್ ಪಡೆಯನ್ನ ನಿಯೋಜಿಸಲಾಗಿತ್ತು. ಆ ವ್ಯಕ್ತಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ಕೂಡಲೇ, ಪೊಲೀಸರು ಅವನನ್ನ ಮಧ್ಯದಲ್ಲಿ ಹಿಡಿದಿದ್ದರು. ಭದ್ರತಾ ಸಂಸ್ಥೆಗಳು ಆತನನ್ನ ವಶಕ್ಕೆ ತೆಗೆದುಕೊಂಡಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ವ್ಯಕ್ತಿಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸಲಾಗಿತ್ತು.