ಪ್ರಪ್ರಥಮ ವುಮೆನ್ಸ್ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದ ಸಮಯ ಬದಲಾವಣೆ

ಪ್ರಪ್ರಥಮ ವುಮೆನ್ಸ್ ಪ್ರೀಮಿಯರ್ ಲೀಗ್ ಉದ್ಘಾಟನಾ ಪಂದ್ಯದ ಸಮಯ ಬದಲಾವಣೆ

ವಿಮೆನ್ಸ್ ಪ್ರೀಮಿಯರ್ ಲೀಗ್‌ನ ಪ್ರಪ್ರಥಮ ಪಂದ್ಯದ ಸಮಯದಲ್ಲಿ ಬದಲಾವಣೆಯಾಗಿದೆ. ಶನಿವಾರ ನವಿ ಮುಂಬೈನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ತಡವಾಗಿ ಆರಂಭವಾಗಲಿದೆ.

ಈ ಮೊದಲು ಈ ಪಂದ್ಯ 7:30ಕ್ಕೆ ಆರಂಭಗೊಳ್ಳಲಿದೆ ಎಂದು ನಿಗದಿಪಡಿಸಲಾಗಿತ್ತು. ಆದರೆ ಅಂತಿಮ ಕ್ಷಣದಲ್ಲಿ ಬದಲಾವಣೆಯಾಗಿದ್ದು ಪಂದ್ಯ 8 ಗಂಟೆಗೆ ಆರಂಬವಾಗಲಿದೆ. ಇನ್ನು ಟೂರ್ನಿಯ ಉದ್ಘಾಟನಾ ಕಾರ್ಯಕ್ರಮಗಳು 6.25ಕ್ಕೆ ಆರಂಭವಾಗಲಿದೆ. ಇನ್ನು ಸಮಯದಲ್ಲಿ ಈ ಬದಲಾವಣೆಗೆ ಕಾರಣ ಏನೆಂಬುದು ಬಹಿರಂಗವಾಗಿಲ್ಲ. ಇನ್ನು ಐತಿಹಾಸಿಕ ವಿಮೆನ್ಸ್ ಪ್ರೀಮಿಯರ್ ಲೀಗ್‌ನ ಮೊಟ್ಟ ಮೊದಲ ಪಂದ್ಯದ ಟಾಸ್ ಸಂಜೆ 7:30ಕ್ಕೆ ನಡೆಯಲಿದೆ.

ಈ ಬಗ್ಗೆ ಮಾಧ್ಯಮ ಪ್ರಕಟಣೆಯುಲ್ಲಿ ಮಾಹಿತಿ ನೀಡಲಾಗಿದ್ದು "ಅಭಿಮಾನಿಗಳಿಗೆ ಸಂಜೆ 4 ಗಂಟೆಗೆ ಗೇಟ್ ತೆರೆದಿರುತ್ತದೆ. ಸಂಜೆ 6. 25ಕ್ಕೆ ಆರಂಭವಾಗಲಿರುವ ಉಸ್ಘಾಟನಾ ಸಮಾರಂಭದ ಕಾರ್ಯಕ್ರಮವನ್ನು ಅವರು ಕೂಡ ವೀಕಲ್ಷಿಸಲು ಅವಕಾಶವಿದೆ" ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚೊಚ್ಚಲ ಆವೃತ್ತಿಯ ಡಬ್ಲ್ಯುಪಿಎಲ್‌ನ ಉದ್ಘಾಟನಾ ಸಮಾರಂಭವನ್ನು ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದ್ದು ಬಾಲಿವುಡ್ ತಾರೆಗಳಾದ ಕಿಯಾರಾ ಅಡ್ವಾಣಿ ಮತ್ತು ಕೃತಿ ಸನೋನ್ ವಿಶೇಷ ಪ್ರದರ್ಶನ ನೀಡಲಿದ್ದಾರೆ. ಇನ್ನು ಕಾರ್ಯಕ್ರಮದಲ್ಲಿ ಗಾಯಕ ಮತ್ತು ಗೀತರಚನೆಕಾರ ಎಪಿ ಧಿಲ್ಲೋನ್ ತಮ್ಮ ಕೆಲ ವಿಶೇಷ ರಷನೆಗಳನ್ನು ಅಭಿಮಾನಿಗಳ ಮುಂದೆ ಪ್ರಸ್ತುತಪಡಿಸಲಿದ್ದಾರೆ.

ಇನ್ನು ವಿಮೆನ್ಸ್ ಪ್ರೀಮಿಯರ್ ಲೀಗ್‌ನಲ್ಲಿ ಒಟ್ಟು ಐದು ತಂಡಗಳು ಪ್ರಶಸ್ತಿಗಾಗಿ ಸೆಣೆಸಾಡಲಿದ್ದು 22 ಪಂದ್ಯಗಳು ನಡೆಯಲಿದೆ. ಮಾರ್ಚ್ 4ರಿಂದ ಮಾರ್ಚ್ 28ರವರೆಗೆ ಮುಂಬೈನ ಎರಡು ತಾಣಗಳಾದ ಡಿವೈ ಪಾಟೀಲ್ ಸ್ಟೇಡಿಯಂ ಹಾಗೂ ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ.

ಸ್ಮೃತಿ ಮಂಧಾನ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ವಹಿಸಿಕೊಂಡರೆ ಹರ್ಮನ್‌ಪ್ರೀತ್ ಕೌರ್ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವ ವಹಿಸಿಕೊಳ್ಳಲಿದ್ದಾರೆ. ಉಳೀದ ಮೂರು ತಂಡಗಳ ನಾಯಕತ್ವ ಆಸಿಸ್ ಆಟಗಾರ್ತಿಯರ ಪಾಲಾಗಿದೆ.ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮೆಗ್ ಲ್ಯಾನ್ನಿಂಗ್, ಗುಜರಾತ್ ಜೈಂಟ್ಸ್ ತಂಡವನ್ನು ಬೆತ್ ಮೂನಿ ಹಾಗೂ ಯುಪಿ ವಾರಿಯರ್ಸ್ ತಂಡವನ್ನು ಅಲಿಸಾ ಹೀಲಿ ಮುನ್ನಡೆಸಲಿದ್ದಾರೆ.

ಆರ್‌ಸಿಬಿ ತಂಡ ತನ್ನ ಮೊದಲ ಪಂದ್ಯವನ್ನು ಭಾನುವಾರ ಆಡಲಿದ್ದು ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅದೃಷ್ಟ ಪಡೀಕ್ಷೆಗೆ ಇಳಿಯಲಿದೆ. ಬ್ರೆಬೋರ್ನ್ ಸ್ಟೇಡಿಯಂನಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ