ಪ್ರಯಾಣಿಕರೇ ಗಮನಿಸಿ : ನಾಳೆ 'BMTC' ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

ಪ್ರಯಾಣಿಕರೇ ಗಮನಿಸಿ : ನಾಳೆ 'BMTC' ಬಸ್ ಸಂಚಾರದಲ್ಲಿ ವ್ಯತ್ಯಯ ಇಲ್ಲ

ಬೆಂಗಳುರು : ನಾಳೆ ಜ.24 ರಂದು ಬಿಎಂಟಿಸಿ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ಬಿಎಂಟಿಸಿ ಪ್ರಕಟಣೆ ಹೊರಡಿಸಿದೆ.

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಸೇವಾ ಸಂಸ್ಥೆಯಾಗಿದ್ದು, ಸಾರ್ವಜನಿಕ ಪುಯಾಣಿಕರಿಗೆ ವ್ಯವಸ್ಥಿತ ಹಾಗೂ ನಿಯಮಿತ ಸಾರಿಗೆ ಸೌಲಭ್ಯವನ್ನು ಒದಗಿಸುವುದು ಸಂಸ್ಥೆಯ ಮೂಲ ಉದ್ದೇಶವಾಗಿರುತ್ತದೆ.

ಈ ನಿಟ್ಟಿನಲ್ಲಿ, ದಿನಾಂಕ 24-01-2023 ರಂದು ಸಂಸ್ಥೆಯ ಸಾರಿಗೆಗಳ ಕಾರ್ಯಾಚರಣೆಯಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ ಎಂದು ಬಿಎಂಟಿಸಿ ಮಾಹಿತಿ ನೀಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆಗೆ (Transport Strike) ಮುಂದಾಗುತ್ತಿರುವ ಹಿನ್ನೆಲೆ ನಾಳೆ ಸಾರಿಗೆ ಬಸ್ ಸಂಚಾರದಲ್ಲಿ ಯಾವುದೇ ವ್ಯತ್ಯಯ ಇಲ್ಲ ಎಂದು ತಿಳಿಸಿದೆ.ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಪ್ರತಿಭಟನೆಗೆ ಕರೆ ನೀಡಿರುವ ಸಾರಿಗೆ ನೌಕರರು ಪ್ರತಿಭಟನೆಗೆ ತಯಾರಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ನೂರಾರು ಸಂಖ್ಯೆಯಲ್ಲಿ ನೌಕರರು ಭಾಗಿಯಾಗುವ ಸಾಧ್ಯತೆ ಇದ್ದು, ಬಸ್ ವ್ಯತ್ಯಯದ ಆತಂಕ ಎದುರಾಗಿತ್ತು.