ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ತಡೆ ವಿಚಾರ; ಶಿಕ್ಷಣ ಸಚಿವರು ಹೇಳಿದ್ದೇನು
ಶಿವಮೊಗ್ಗ: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಗೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ನ್ಯಾಯಾಲಯದ ತೀರ್ಪಿನ ಬಳಿಕ ನಿರ್ಧರಿಸುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಸಚಿವರು, ಜನವರಿ 14ರಂದು ನ್ಯಾಯಾಲಯ ಅಂತಿಮ ವಿಚಾರಣೆ ನಡೆಸಲಿದೆ.
ಕೋರ್ಟ್ ತೀರ್ಪು ಬಂದ ಬಳಿಕ ತೀರ್ಮಿಸಲಾಗುವುದು. 43,000 ಶಿಕ್ಷಕರ ಹುದ್ದೆಗಳು ಖಾಲಿ ಇದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡುತ್ತವೆ ಎಂದು ಹೇಳಿದರು.